ಶ್ರೀರಾಮುಲು ಕೈಗೆ ಮುತ್ತಿಟ್ಟು, ಕಾಲಿಗೆ ನಮಸ್ಕರಿಸಿದ ನಾರಾಯಣಗೌಡ

ಮಂಡ್ಯ: ಕೆ.ಆರ್.ಪೇಟೆ ಬಿಜೆಪಿ ಅಭ್ಯರ್ಥಿ ನಾರಾಯಾಣಗೌಡ ಸಚಿವ ಶ್ರೀರಾಮುಲು ಅವರ ಕೈಗೆ ಮುತ್ತಿಟ್ಟು ಕಾಲಿಗೆ ನಮಸ್ಕರಿಸಿದ್ದಾರೆ.

ಉಪಚುನಾವಣೆ ಹಿನ್ನೆಲೆಯಲ್ಲಿ ಸಚಿವ ಶ್ರೀರಾಮುಲು ಮತ್ತು ಡಿಸಿಎಂ ಅಶ್ವಥ್ ನಾರಾಯಣ ಪ್ರಚಾರದಲ್ಲಿ ಭಾಗಿಯಾಗಿದ್ದರು. ಸಮಾವೇಶಲ್ಲಿ ಭಾಗಿಯಾಗಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ಮಾಜಿ ಪ್ರಧಾನಿ ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದ ಶ್ರೀರಾಮುಲು, ಮಹಿಳೆಯರ ಶಾಪದಿಂದಾಗಿ ನಿಖಿಲ್ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಸೋತರು. ಕಾಮಾಟಿಪುರದ ಬಗ್ಗೆ ಕೆಟ್ಟದಾಗಿ ಜೆಡಿಎಸ್ ನಾಯಕರು ಮಾತನಾಡುತ್ತಾರೆ. ಈ ಹಿಂದೆ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ಲೋಕಸಭಾ ಚುನಾವಣೆಯಲ್ಲಿ ಜನರು ಉತ್ತರ ನೀಡಿದ್ದಾರೆ. ರಾಜ್ಯದ ಜನ ಬಿಜೆಪಿಗೆ ಮತ ನೀಡಿದ್ದರಿಂದ ನಾವು ಸರ್ಕಾರ ರಚನೆ ಮಾಡಿದ್ದೇವೆ ಎಂದು ಶ್ರೀರಾಮುಲು ತಿಳಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಅವಧಿ ಮುಕ್ತಾಯಗೊಂಡಿದ್ದು, ಉಪಚುನಾವಣೆಯಲ್ಲಿ ಒಳಮೈತ್ರಿ ಮಾಡಿಕೊಂಡಿವೆ. ಸದೃಢ ಪಕ್ಷ ಬಿಜೆಪಿಗೆ ನೀವೆಲ್ಲರೂ ಮತ ನೀಡಬೇಕು. ಬಿಜೆಪಿ ಬಿಟ್ಟು ಬೇರೆ ಯಾವ ಪಕ್ಷವೂ ಶಾಶ್ವತವಲ್ಲ. ನಾರಾಯಣಗೌಡರ ತ್ಯಾಗದಿಂದ ನಮ್ಮ ಸರ್ಕಾರ ನಡೆಯುತ್ತಿದೆ. ನಮ್ಮ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗಲು ನಾನು ಬಿಡಲ್ಲ ಎಂದು ರಕ್ತದಲ್ಲಿ ಬರೆದು ಕೊಡ್ತೀನಿ ಎಂದು ಹೇಳಿದರು.

Comments

Leave a Reply

Your email address will not be published. Required fields are marked *