UP Election- ಮತ ನೀಡಿ ಪ್ರಜಾಪ್ರಭುತ್ವವನ್ನು ಬಲಪಡಿಸಿ: ಮೋದಿ

ಲಕ್ನೋ: ಎಲ್ಲಾ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಬಳಸಿಕೊಂಡು ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೊಡುಗೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಕರೆ ನೀಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ 4ನೇ ಹಂತದ ಮತದಾನದ ದಿನವಾಗಿದೆ. ಪ್ರತಿಯೊಬ್ಬರೂ ಮತದಾನ ಮಾಡಿ ಎಂದು ಎಲ್ಲ ಮತದಾರರಲ್ಲಿ ಕೇಳಿಕೊಳ್ಳುತ್ತೇನೆ. ಎಲ್ಲಾ ಮತದಾರರು ತಮ್ಮ ಅಮೂಲ್ಯವಾದ ಮತವನ್ನು ಬಳಸಿಕೊಂಡು ಪ್ರಜಾಪ್ರಭುತ್ವವನ್ನು ಬಲಪಡಿಸಲು ತಮ್ಮ ಕೊಡುಗೆ ನೀಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಉತ್ತರಪ್ರದೇಶ ವಿಧಾನಸಭೆ ಚುನಾವಣೆಯ 9 ಜಿಲ್ಲೆಗಳಿಗೆ ನಾಲ್ಕನೇ ಹಂತದ ಮತದಾನ ಇಂದು ನಡೆಯುತ್ತಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನವು 6 ಗಂಟೆಗೆ ಮುಕ್ತಾಯವಾಗಲಿದೆ. ಕೊರೊನಾ ನಿಯಮಗಳೊಂದಿಗೆ ಮತದಾನ ನಡೆಯಲಿದ್ದು, ಸಾಮಾಜಿಕ ಅಂತರ ಕಾಪಾಡಲು 1 ಗಂಟೆ ಹೆಚ್ಚಿನ ಸಮಯ ನೀಡಲಾಗಿದೆ. 9 ಜಿಲ್ಲೆಗಳ 60 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯಿ, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ಆರಂಭವಾಗಲಿದೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

ಕಳೆದ ಬಾರಿ 60 ಸ್ಥಾನಗಳಲ್ಲಿ ಬಿಜೆಪಿ 51 ಸೀಟು ಗೆದ್ದಿತ್ತು. 9 ಜಿಲ್ಲೆಗಳ ಪೈಕಿ 4 ಜಿಲ್ಲೆಗಳಲ್ಲಿ ಎಲ್ಲಾ ಕ್ಷೇತ್ರಗಳನ್ನು ಗೆದ್ದಿತ್ತು. ಈಗ ಆಡಳಿತ ವಿರೋಧಿ ಅಲೆ ನಡುವೆ ಮತ್ತೆ ಗೆಲ್ಲುವ ಸಂಕಷ್ಟದಲ್ಲಿ ಬಿಜೆಪಿಯಿದೆ. ಮೊದಲ 3 ಹಂತಗಳಲ್ಲಿ ಎಸ್‍ಪಿ-ಆರ್‌ಎಲ್‍ಡಿ ಮೈತ್ರಿ ಮುನ್ನಡೆ ಸಾಧ್ಯತೆಯಿದೆ. 4ನೇ ಹಂತದಲ್ಲಿ ಬಿಜೆಪಿ ತನ್ನ ಭದ್ರಕೋಟೆ ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದೆ. ಉತ್ತರಪ್ರದೇಶದಲ್ಲಿ 4ನೇ ಹಂತದ ಮತದಾನವೂ ರಾಜಕಾರಣದಲ್ಲಿ ನಿರ್ಣಾಯಕ ಪಾತ್ರವಹಿಸಲಿದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧ ರಷ್ಯಾ ಯುದ್ಧ ಕಹಳೆ – ರಷ್ಯಾ ಮೇಲೆ ಹಣಕಾಸು ಸೇರಿ ವಿವಿಧ ನಿರ್ಬಂಧ ಹೇರಿದ ಅಮೆರಿಕ!

Comments

Leave a Reply

Your email address will not be published. Required fields are marked *