1000ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಪಾಸಿಟಿವ್

ನವದೆಹಲಿ: ಕೋವಿಡ್-19 ಸೋಂಕಿತರ ಸಂಖ್ಯೆ ಭಾರತದಲ್ಲಿ ಏರುತ್ತಿದ್ದು, ಈಗ 1000ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಗೆ ಕೊರೊನಾ ಮಹಾಮಾರಿ ವಕ್ಕರಿಸಿಕೊಂಡಿದೆ.

ಹೆಚ್ಚುವರಿ ಪೊಲೀಸ್ ಕಮಿಷನರ್(ಕ್ರೈಂ ಬ್ರಾಂಚ್) ಸೇರಿದಂತೆ ದೆಹಲಿಯ ಸುಮಾರು 1,000 ಪೊಲೀಸ್ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಈ ಕುರಿತು ಕುದ್ದು ಅಧಿಕಾರಿಗಳೇ ಇಂದು ತಿಳಿಸಿದ್ದಾರೆ. ಅದರಲ್ಲಿಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸೋಂಕಿತರ ಸಂಖ್ಯೆ ಉಲ್ಬಣವಾಗುತ್ತಿದೆ.

ಕನ್ಸಲ್ಟೆಂಟ್ ಅನಿಲ್ ಮಿತ್ತಲ್ ಈ ಕುರಿತು ಮಾತನಾಡಿದ್ದು, ಸುಮಾರು ಒಂದು ಸಾವಿರ ಪೊಲೀಸ್ ಸಿಬ್ಬಂದಿ ಇದೀಗ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಪ್ರಸ್ತುತ ಅವರೆಲ್ಲರೂ ಕ್ವಾರಂಟೈನ್‍ನಲ್ಲಿದ್ದಾರೆ. ಅಧಿಕಾರಿಗಳು ಸಂಪೂರ್ಣವಾಗಿ ಚೇತರಿಸಿಕೊಂಡ ನಂತರ ಕರ್ತವ್ಯಕ್ಕೆ ಮರಳುತ್ತಾರೆ ಎಂದು ವಿವರಿಸಿದರು. ಇದನ್ನೂ ಓದಿ: ಕಾಂಗ್ರೆಸ್ಸಿನ ಸರ್ವನಾಶಕ್ಕೆ ಅವರೇ ಎಲ್ಲ ಕೆಲಸಗಳನ್ನು ಮಾಡಿಕೊಳ್ಳುತ್ತಿದ್ದಾರೆ: ಪ್ರತಾಪ್ ಸಿಂಹ

ಇತ್ತೀಚೆಗೆ ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರು ಪೊಲೀಸ್ ಸಿಬ್ಬಂದಿಗೆ ವೈರಸ್ ಹರಡುವುದನ್ನು ತಡೆಗಟ್ಟಲು ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್(ಎಸ್‍ಒಪಿ) ಅನ್ನು ಹೊರಡಿಸಿದ್ದರು. ಪೊಲೀಸರು ಸಾರ್ವಜನಿಕರ ಮಧ್ಯೆ ತಮ್ಮ ಕರ್ತವ್ಯವನ್ನು ನಿರ್ವಹಿಸುತ್ತಾರೆ. ಪರಿಣಾಮ ಅವರಿಗೆ ಕೊರೊನಾ ಬೇಗ ಹರಡುತ್ತೆ. ಅದಕ್ಕೆ ಅವರು ಕೋವಿಡ್ ನಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಸಾಕಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಈ ಮೂಲಕ ತಿಳಿಸಿದರು.

ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸುತ್ತಿರುವಾಗ ಸರಿಯಾಗಿ ಫೇಸ್ ಮಾಸ್ಕ್ ಹಾಕಿಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕರ್ತವ್ಯದ ಸಮಯದಲ್ಲಿ ಸರಿಯಾಗಿ ಕೈಗಳನ್ನು ತೊಳೆಯುವುದು ತುಂಬಾ ಮುಖ್ಯ ಎಂದು ವಿವರಿಸಿದರು. ಲಸಿಕೆ ಹಾಕಿಸಿಕೊಳ್ಳದ ಎಲ್ಲ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದ ಸದಸ್ಯರು ಲಸಿಕೆ ಹಾಕಿಸಿಕೊಳ್ಳಬೇಕು ಎಂದು ವಿನಂತಿಸಿಕೊಂಡಿರು. ವೈದ್ಯಕೀಯ ಕಾರಣಗಳಿಂದ ಲಸಿಕೆಯನ್ನು ಪಡೆಯದಿದ್ದಾರೆ, ಅವರು ಮತ್ತೊಮ್ಮೆ ವೈದ್ಯಕೀಯ ಸಲಹೆ ಪಡೆದು ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಿ ಎಂದು ತಿಳಿಸಿದರು. ಇದನ್ನೂ ಓದಿ: ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

Comments

Leave a Reply

Your email address will not be published. Required fields are marked *