ರಾಜ್ಯದಲ್ಲಿ ಮೆಡಿಕಲ್ ಸೀಟ್‍ಗಳ ಶುಲ್ಕ ಕಡಿತಕ್ಕೆ ಚಿಂತನೆ – ಏನಿದು ಬೊಮ್ಮಾಯಿ ಎಬಿಸಿ ಸೂತ್ರ?

ದಾವಣಗೆರೆ: ಕರ್ನಾಟಕದಲ್ಲಿ ಮೆಡಿಕಲ್ ಸೀಟುಗಳ ಶುಲ್ಕವನ್ನು ಕಡಿತಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದಾವಣಗೆರೆಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರಿ ಮೆಡಿಕಲ್ ಕಾಲೇಜುಗಳ ಸೀಟುಗಳು ಕಡಿಮೆ ಶುಲ್ಕವೇ ಇದೆ. ಖಾಸಗಿ ಕಾಲೇಜುಗಳಲ್ಲಿ ಮಾತ್ರ ಶುಲ್ಕ ಹೆಚ್ಚಾಗಿದೆ. ಶೇ.90 ರಷ್ಟು ಅಂಕ ಪಡೆದ ವಿದ್ಯಾರ್ಥಿಗಳಿಗೂ ಮೆಡಿಕಲ್ ಸೀಟು ಸಿಗುತ್ತಿಲ್ಲ. ಹಾಗಾಗಿ ಅವರು ಎನ್‍ಆರ್‍ಐ ಅಥವಾ ಮ್ಯಾನೇಜ್ಮೆಂಟ್ ಸೀಟುಗಳನ್ನು ಬಯಸುತ್ತಾರೆ. ಇದರಿಂದ ಶುಲ್ಕ ಹೆಚ್ಚಾಗುತ್ತಿರುವ ಕಾರಣ ಅವರು ವಿದೇಶಗಳಲ್ಲಿ ವ್ಯಾಸಂಗ ಮಾಡಲು ತೆರಳುತ್ತಿದ್ದಾರೆ. ಹಾಗಾಗಿ ಶುಲ್ಕ ಕಡಿತಗೊಳಿಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ನಮ್ಮ ರಾಜ್ಯದಲ್ಲಿ ಶುಲ್ಕ ಕಡಿತಗೊಳಿಸಲು ಎ-ಬಿ-ಸಿ ಕೆಟಗೆರಿ ಮಾಡಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದೆ. ಈ ಬಗ್ಗೆ ನ್ಯಾಷನಲ್ ಮೆಡಿಕಲ್ ಕೌನ್ಸಿಲ್ ಸಹ ಚಿಂತನೆ ನಡೆಸಿದೆ. ಜೊತೆಗೆ ಉಕ್ರೇನ್ ಮಾತ್ರವಲ್ಲದೇ ಬೇರೆ ದೇಶಗಳಿಂದಲೂ ವಿದ್ಯಾಭ್ಯಾಸ ಮೊಟಕುಗೊಳಿಸಿ ಕರ್ನಾಟಕಕ್ಕೆ ಆಗಮಿಸಿರುವ ವಿದ್ಯಾರ್ಥಿಗಳ ಶಿಕ್ಷಣದ ಬಗ್ಗೆ ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.

ದೇಶಾದ್ಯಂತ ಸದ್ದು ಮಾಡಿತ್ತು ಬ್ಯಾನ್‍ನೀಟ್
ವಿದ್ಯಾರ್ಥಿ ನವೀನ್ ಉಕ್ರೇನ್‍ನಲ್ಲಿ ಸಾವಿಗೀಡಾದ ಬೆನ್ನಲ್ಲೇ ರಾಜ್ಯದಲ್ಲಿ ಈಚೆಗಷ್ಟೇ #ಬ್ಯಾನ್ ನೀಟ್ ಅಭಿಯಾನ ನಡೆದಿತ್ತು. ರಾಜ್ಯದ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿ ಇರುವ ಮೆಡಿಕಲ್ ಕಾಲೇಜುಗಳಲ್ಲಿ ಸೀಟ್ ಸಿಗದ ಪರಿಣಾಮ ಉಕ್ರೇನ್ ನಂಹತ ದೇಶಗಳಿಗೆ ತೆರಳಿ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದಾರೆ. ಇದೀಗ ಉಕ್ರೇನ್-ರಷ್ಯಾ ಯುದ್ಧದಿಂದ ನಮ್ಮ ರಾಜ್ಯದ ನವೀನ್ ಅವರನ್ನು ಕಳೆದುಕೊಳ್ಳಬೇಕಾಯಿತು. ಇದೆಲ್ಲಕ್ಕೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೀಟ್ ಪರೀಕ್ಷೆ ಕಾರಣವಾಗಿದೆ ಎಂದು ಹಲವರು ಆರೋಪಿಸಿ ಸೋಷಲ್ ಮೀಡಿಯಾಗಳಲ್ಲಿ #ಬ್ಯಾನ್‍ನೀಟ್’ ಅಭಿಯಾನ ಆರಂಭಿಸಿದ್ದರು. ಇದನ್ನೂ ಓದಿ: 13 ಗಂಟೆಯಲ್ಲಿ ಶ್ರೀಲಂಕಾದಿಂದ ತಮಿಳುನಾಡಿಗೆ ಸ್ವಿಮ್ಮಿಂಗ್ ಮಾಡಿದ 13ರ ಬಾಲಕಿ

ಅಂಡಮಾನ್ ಮತ್ತು ನಿಕೋಬಾರ್ ಐಲ್ಯಾಂಡ್‍ನಲ್ಲಿ 1, ಆಂಧ್ರಪ್ರದೇಶದಲ್ಲಿ 31, ಅರುಣಾಚಲಂನಲ್ಲಿ 1, ಅಸ್ಸಾಂನಲ್ಲಿ 8, ಬಿಹಾರದಲ್ಲಿ 16, ಛಂಡೀಘರ್‍ನಲ್ಲಿ 1, ಛತ್ತಿಸ್‍ಘರ್‍ನಲ್ಲಿ 10, ದಾದ್ರಾ ನಗರಲ್ಲಿ 1, ದೆಹಲಿಯಲ್ಲಿ 10, ಗೋವಾದಲ್ಲಿ 1, ಗುಜರಾತ್‍ನಲ್ಲಿ 29, ಹರಿಯಾಣದಲ್ಲಿ 12, ಹಿಮಾಚಲ್ ಪ್ರದೇಶದಲ್ಲಿ 7, ಜಮ್ಮು ಮತ್ತು ಕಾಶ್ಮೀರದಲ್ಲಿ 8, ಜಾಖರ್ಂಡ್‍ನಲ್ಲಿ 7, ಕರ್ನಾಟಕದಲ್ಲಿ 60, ಕೇರಳದಲ್ಲಿ 32, ಮಧ್ಯಪ್ರದೇಶದಲ್ಲಿ 22, ಮಹಾರಾಷ್ಟ್ರದಲ್ಲಿ 22, ಮಣಿಪುರದಲ್ಲಿ 2, ಮೇಘಾಲಯ- ಮಿಜೋರಾಂನಲ್ಲಿ ತಲಾ 1, ಒಡಿಶಾದಲ್ಲಿ 12, ಪುದುಚೆರಿನಲ್ಲಿ 9, ಪಂಜಾಬ್‍ನಲ್ಲಿ 10, ರಾಜಾಸ್ತಾನ್‍ನಲ್ಲಿ 23, ಸಿಕ್ಕಿಂನಲ್ಲಿ 1, ತಮಿಳುನಾಡಿನಲ್ಲಿ 50, ತೆಲಂಗಾಣದಲ್ಲಿ 33, ತ್ರಿಪುರದಲ್ಲಿ 2 ಹಾಗೂ ಉತ್ತರ ಪ್ರದೇಶದಲ್ಲಿ 22 ವೈದ್ಯಕೀಯ ಕಾಲೇಜುಗಳು ಇವೆ. ಆದರೆ, ಇಲ್ಲಿನ ದುಬಾರಿ ವೆಚ್ಚದ ಪರಿಣಾಮದಿಂದಾಗಿ ವಿದೇಶಗಳಿಗೆ ತೆರಳಿತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದರ ಜೊತೆಗೆ ಫೇಸ್‍ಬುಕ್, ಟ್ವಿಟ್ಟರ್ ಗಳಲ್ಲಿ #ಬ್ಯಾನ್‍ನೀಟ್ ಟ್ರೆಂಡಿಂಗ್ ಸದ್ದು ಮಾಡಿತ್ತು. ಚಲನಚಿತ್ರನಟ ಸೂರ್ಯ ಸಹ ಇದಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಸರ್ರಂತ ಸುಡುವ ಜ್ವಾಲಾಗ್ನಿ ಆಗಿ ಬಂದ ಈ ತೂಫಾನ್: ಕೆಜಿಎಫ್ 2 ಫಸ್ಟ್ ಲಿರಿಕಲ್ ಹಾಡು ರಿಲೀಸ್

Comments

Leave a Reply

Your email address will not be published. Required fields are marked *