ಮೈಸೂರು: ವೈದ್ಯರ ಎಡವಟ್ಟಿನಿಂದಾಗಿ ಬಾಲಕನೊಬ್ಬ ಕೋಮಾ ಸ್ಥಿತಿ ತಲುಪಿದ ಘಟನೆ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ.
ನಂಜನಗೂಡು ತಾಲೂಕಿನ ಕಡುಬುರು ಗ್ರಾಮದ ನಿವಾಸಿ ಅಭಿ (14) ಅಸ್ವಸ್ಥಗೊಂಡ ಬಾಲಕ. ವೈದ್ಯರ ನಿರ್ಲಕ್ಷ್ಯದಿಂದಲೇ ಹೀಗೆ ಆಗಿದೆ ಎಂದು ಅಭಿ ಪೋಷಕರು ಗಂಭೀರವಾಗಿ ಆರೋಪಿಸಿದ್ದಾರೆ.
ಘಟನೆಯ ವಿವರ: ಬಾಲಕ ಅಭಿಗೆ ಕಿವಿ ನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆ ಕೊಡಿಸಲು ಪೋಷಕರು 4 ದಿನಗಳ ಹಿಂದೆಯೇ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಿದ್ದರು. ವೈದ್ಯರು ನಿನ್ನೆ ರಾತ್ರಿ ಚುಚ್ಚು ಮದ್ದು ನೀಡಿದ್ದ ಪರಿಣಾಮ ಬಾಲಕ ಅಸ್ವಸ್ಥಗೊಂಡು ಕೋಮಾ ಸೇರುವಂತಾಗಿದೆ. ವೈದ್ಯರ ನಿರ್ಲಕ್ಷವೇ ಇದಕ್ಕೆ ಕಾರಣ ಎಂದು ಅಭಿ ಪೋಷಕರು ಆರೋಪ ಮಾಡಿದ್ದು, ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply