ಅಸ್ವಸ್ಥ ತಾಯಿಗೆ ಔಷಧ ಕೇಳಿದ ಬಾಲಕಿ ಮೇಲೆ ಅತ್ಯಾಚಾರ

RAPE

ನವದೆಹಲಿ: ತಾಯಿಗೆ ಹುಷಾರಿಲ್ಲವೆಂದು ಸಹಾಯ ಕೇಳಿದ ಅಪ್ರಾಪ್ತ ಬಾಲಕಿ ಮೇಲೆ ನೆರೆಮನೆಯ ವ್ಯಕ್ತಿ ಅತ್ಯಾಚಾರವೆಸಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

ಈ ಘಟನೆ ಜನವರಿ 22ರಂದು ಸಂಭವಿಸಿದ್ದು, ಮರುದಿನ ದೆಹಲಿಯ ಪಾಂಡವ್ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಬಾಲಕಿ ದೂರು ದಾಖಲಿಸಿದ್ದಾಳೆ. ಗ್ರಾಮಕ್ಕೆ ಹೋಗಿದ್ದ ಬಾಲಕಿ ತನ್ನ ಅನಾರೋಗ್ಯ ಪೀಡಿತ ತಾಯಿಯೊಂದಿಗೆ ಮನೆಯಲ್ಲಿ ಒಬ್ಬಳೆ ಇದ್ದಳು. ತಾಯಿಯ ಆರೋಗ್ಯ ತೀರಾ ಹದಗೆಟ್ಟಿದ್ದರಿಂದ ಬಾಲಕಿ ನೆರೆಹೊರೆಯವರ ಬಳಿ ಸಹಾಯ ಕೇಳಿದ್ದಾಳೆ. ಇದನ್ನೂ ಓದಿ: ಸಿಎಂ ಅಭ್ಯರ್ಥಿ ಘೋಷಿಸಲಿ, ಯಾರು ಉಳಿಯುತ್ತಾರೆ, ಹೋಗುತ್ತಾರೆ ನೋಡೋಣ: ಸಿ.ಟಿ. ರವಿ

ಈ ವೇಳೆ ಔಷಧಿ ಕೊಡಿಸಿ ಸಹಾಯ ಮಾಡುವ ನೆಪದಲ್ಲಿ ಆರೋಪಿ ಬಾಲಕಿಯನ್ನು ಪ್ರತ್ಯೇಕ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಇದಲ್ಲದೇ ಆಕೆಗೆ ಈ ವಿಚಾರ ಹೊರಗೆ ಹೇಳಿದರೆ, ಕೊಲ್ಲುವುದಾಗಿ ಬೆದರಿಕೆಯೊಡ್ಡಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದೀಗ ಬಾಲಕಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಇದನ್ನೂ ಓದಿ: ಆತ್ಮ ಗೌರವ ಇದ್ದವರು ಯಾರೂ ಕಾಂಗ್ರೆಸ್‍ಗೆ ವಾಪಸ್ ಹೋಗಲ್ಲ: ಬಿ.ಸಿ.ಪಾಟೀಲ್

Comments

Leave a Reply

Your email address will not be published. Required fields are marked *