ನೆಲಮಂಗಲ: ರೈತರ ಜಮೀನಿನ ಪಹಣಿಯಲ್ಲಿ ಇರುವ ಸಮಸ್ಯೆಗೆ ಶೀಘ್ರ ಪರಿಹಾರ ನೀಡುವ ನಿಟ್ಟಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ, ರವೀಂದ್ರ ಇಂದು ಬೆಂಗಳೂರು ಹೊರವಲಯದ ನೆಲಮಂಗಲ ನಗರದ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಶೀಲನೆ ನಡೆಸಿದರು.
ಭೇಟಿ ವೇಳೆ ಸ್ಥಳದಲ್ಲಿದ್ದ ರೈತರು ತಮಗಾಗುತ್ತಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಮುಂದಿಟ್ಟರು. ಕೂಡಲೇ ಜನರ ಸಮಸ್ಯೆಗೆ ಸ್ಪಂದಿಸಿದ ಡಿಸಿ ರವೀಂದ್ರ, ಬೆಳೆ ದರ್ಶಕ ಆ್ಯಪ್ ನಿಂದ ಜಮೀನಿನ ಪಹಣಿಯಲ್ಲಿ ಯಾವ ಬೆಳೆ ಬೆಳೆದಿದ್ದಾರೆ ಅನ್ನೋದು ನಮೂದಾಗಿಲ್ಲ ಅಂದರೆ ಅಲ್ಲಿ ಆಕ್ಷೇಪಣೆಯನ್ನು ಸಲ್ಲಿಸಬಹುದು. ನಂತರ ಸಂಬಂಧಪಟ್ಟ ಅಧಿಕಾರಿಗಳು ಅದನ್ನು ಸರಿಪಡಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗ್ತಾರೆ ಅಂತ ತಿಳಿಸಿದರು.

ಇತ್ತ ಕೃಷಿ ಅಧಿಕಾರಿಗಳ ನಡೆ ವಿರುದ್ಧ ಗರಂ ಆದ ಜಿಲ್ಲಾಧಿಕಾರಿ, ರೈತರ ಸಮಸ್ಯೆಗೆ ಸೂಕ್ತ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುವಂತೆ ಹೇಳಿದರು. ಈ ವೇಳೆ ನೆಲಮಂಗಲ ತಹಶೀಲ್ದಾರ್ ಶ್ರೀನಿವಾಸಯ್ಯ ಆರ್.ಐ ಸುದೀಪ್ ಮತ್ತಿತ್ತರ ಅಧಿಕಾರಿಗಳು ಹಾಜರಿದ್ದರು.

Leave a Reply