ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ: ಆರ್. ಅಶೋಕ್ ಭವಿಷ್ಯ

ಮೈಸೂರು: ಈ ಬಾರಿ ದಸರಾ ಸಿದ್ದರಾಮಯ್ಯ ಅಲ್ಲ ನೂತನ ಸಿಎಂ ಮಾಡ್ತಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ಸೆಪ್ಟೆಂಬರ್ ತಿಂಗಳಲ್ಲಿ ಕಾಂಗ್ರೆಸ್‍ನಲ್ಲಿ ಬದಲಾವಣೆ ಆಗುವ ವದಂತಿ ಬಗ್ಗೆ ಪ್ರತಿಕ್ರಿಯಿಸಿದರು. ಈ ವೇಳೆ, ಸಿಎಂ ಬದಲಾವಣೆ ನಿಶ್ಚಿತವಾಗಿದೆ. ಶಾಸಕರು ಸಚಿವರು ಈಗ ಅದನ್ನೇ ಹೇಳುತ್ತಿದ್ದಾರೆ. ಅಧಿಕಾರ ಹಸ್ತಾಂತರ ಮೊದಲೇ ನಿಶ್ಚಯವಾಗಿದೆ. ಆದರೂ ಸಿದ್ದರಾಮಯ್ಯ, ಏನೂ ಆಗಿಲ್ಲ ಅನ್ನೋ ರೀತಿ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Mysuru Dasara | ಸೆ.22ರಿಂದ 11 ದಿನಗಳ ಕಾಲ ವಿಜೃಂಭಣೆಯ ದಸರಾ

ಕಾಂಗ್ರೆಸ್‍ನಲ್ಲಿ ಅಧಿಕಾರದ ಕಿತ್ತಾಟ ತಾರಕಕ್ಕೆ ಏರಿದೆ. ಈ ಭ್ರಷ್ಟ ಸರ್ಕಾರ ಯಾವಾಗ ಕಿತ್ತು ಹೋಗುತ್ತದೆ ಎಂದು ಜನ ಕಾಯುತ್ತಿದ್ದಾರೆ. ಸಿದ್ದರಾಮಯ್ಯ ಸುಳ್ಳಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ತುರ್ತು ಪರಿಸ್ಥಿತಿ ಬಗ್ಗೆ ತನ್ನ ನಿಲುವು ಸ್ಪಷ್ಟಪಡಿಸಬೇಕು. ತುರ್ತು ಪರಿಸ್ಥಿತಿ ಸರಿ ಎನ್ನುವುದು ಕಾಂಗ್ರೆಸ್ ಮನಸ್ಥಿತಿ ಎನ್ನುವುದಾದರೆ ಅದನ್ನ ಬಹಿರಂಗವಾಗಿ ಹೇಳಲಿ. ಮಲ್ಲಿಕಾರ್ಜುನ ಖರ್ಗೆ ಅವ್ರು ಇದು ಅಘೋಷಿತ ತುರ್ತು ಪರಿಸ್ಥಿತಿ ಎಂದು ಹೇಳಿದ್ದಾರೆ. ಯಾವುದು ಅಘೋಷಿತ ತುರ್ತು ಪರಿಸ್ಥಿತಿ ಮಲ್ಲಿಕಾರ್ಜುನ ಖರ್ಗೆಯವರೇ? ನಿಮಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕೊಟ್ಟಿಲ್ಲವಾ? ಭಾರತದ ಬಗ್ಗೆ ಅಮೇರಿಕಕ್ಕೆ ಹೋಗಿ ಮಾತನಾಡಲು ಅವಕಾಶ ಕೊಟ್ಟಿಲ್ಲವಾ? ನಿಮಗೆ ಯಾವುದಕ್ಕೆ ನಿಬರ್ಂಧ ಇದೆ ಹೇಳಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ?