ಹೊಸ ಮದ್ಯದಂಗಡಿಗಳಿಗೆ ಲೈಸೆನ್ಸ್ ನೀಡಲ್ಲ ಅಂತಿದ್ದಾರೆ ಸಿಎಂ-ಉದ್ಯೋಗ ಸೃಷ್ಟಿಯ ಚಿಂತನೆಯಿದೆ ಅಂತಿದ್ದಾರೆ ಡಿಸಿಎಂ

ರಾಮನಗರ: ರಾಜ್ಯದಲ್ಲಿ ಮದ್ಯದಂಗಡಿಗಳಿಗೆ (Liquor Shop) ಹೊಸ ಲೈಸೆನ್ಸ್ (License) ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದರೆ ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಈ ವಿಚಾರದಲ್ಲಿ ದಂದ್ವ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಳೆದ 30 ವರ್ಷದಿಂದ ಯಾವುದೇ ಅಬಕಾರಿ ಲೈಸೆನ್ಸ್ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಒಂದಷ್ಟು ಅನುಕೂಲ ಆಗಲಿ ಎಂಬ ಕಾರಣಕ್ಕೆ ಈ ಬಗ್ಗೆ ಚಿಂತನೆ ಮಾಡಲಾಗಿತ್ತು. ಹಳ್ಳಿಹಳ್ಳಿಗಳಲ್ಲಿ ನಾವು ಬಾರ್ ತೆಗೆಯುವುದಿಲ್ಲ ಎಂದು ಹೇಳಿದರು.  ಇದನ್ನೂ ಓದಿ: ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ಇಲ್ಲ: ಪಬ್ಲಿಕ್‌ ಟಿವಿಗೆ ಕೊಟ್ಟ ಮಾತು ಉಳಿಸಿಕೊಂಡ ಸಿಎಂ

ಸರ್ಕಾರ ಎಲ್ಲರೊಂದಿಗೆ ಚರ್ಚೆ ಮಾಡಿ, ಸೂಕ್ತ ಪ್ರದೇಶಗಳಲ್ಲಿ ಬಾರ್‌ಗಳನ್ನು ತೆರೆಯಲಾಗುವುದು. ಕೆಲವರು 3-4 ಕೋಟಿ ರೂ.ಗೆ ಲೈಸೆನ್ಸ್‌ ಮಾರಾಟ ಮಾಡುತ್ತಿದ್ದಾರೆ. ಕುಡಿಯುವುದನ್ನು ನೀವು ತಪ್ಪಿಸಲು ಸಾಧ್ಯವಿಲ್ಲ, ನಾವು ತಪ್ಪಿಸಲು ಸಾಧ್ಯವಿಲ್ಲ ಎಂದು ಹೇಳಿದರು.

 

ಸಿಎಂ ಹೇಳಿದ್ದೇನು?
ಬೆಳಕು (Belaku) 200ನೇ ಸಂಚಿಕೆಯ ವಿಶೇಷ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಬ್ಲಿಕ್ ಟಿವಿ (PUBLiC TV) ಮುಖ್ಯಸ್ಥ ಹೆಚ್.ಆರ್.ರಂಗನಾಥ್ (HR Ranganath) ಅವರು ಯಾವುದೇ ಕಾರಣಕ್ಕೂ ಮದ್ಯದಂಗಡಿಗಳಿಗೆ ಹೊಸ ಲೈಸೆನ್ಸ್ ನೀಡಬೇಡಿ ಎಂದು ಮನವಿ ಮಾಡಿದ್ದರು.

ಈ ಮನವಿಗೆ ಸ್ಪಂದಿಸಿದ ಅವರು, ಮದ್ಯದಂಗಡಿ ಹೊಸ ಪರವಾನಗಿ ನೀಡುವುದಕ್ಕೆ ಮಹಿಳೆಯರ ವಿರೋಧ ಇದೆ. ಹಣಕಾಸಿನ ಕೊರತೆ ಇದ್ದರೂ ಮದ್ಯದಂಗಡಿ ಹೊಸ ಲೈಸೆನ್ಸ್‌ ನೀಡಲು ನಾನು ಅನುಮತಿ ನೀಡುವುದಿಲ್ಲ ಎಂದು ವಾಗ್ದಾನ ಮಾಡಿದರು.

 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]