ಮೈಸೂರು: ಹೊಸ ವರ್ಷವನ್ನು ಅದ್ಧೂರಿಯಾಗಿ ಆಚರಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಇಂದು ಸಂಜೆಯಿಂದಲೇ ಅರಮನೆಯಲ್ಲಿ ಸಾಂಸ್ಕೃತಿಕ ವೈಭವ ಆರಂಭವಾಗಲಿದೆ.
ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಲು ಮೈಸೂರು ಸಿಂಗಾರಗೊಂಡಿದೆ. ಇಂದು ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿ 12 ರವರೆಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅರಮನೆ ಆವರಣದಲ್ಲಿ ನಡೆಯಲಿವೆ. 12 ಗಂಟೆಗೆ ಸರಿಯಾಗಿ ಪಟಾಕಿ, ಬಾಣಬಿರುಸುಗಳನ್ನು ಸಿಡಿಸಲು ಎಲ್ಲಾ ತಯಾರಿಯನ್ನು ಕೂಡ ಮಾಡಿಕೊಳ್ಳಲಾಗಿದೆ. ಈ ಸಂತೋಷದ ಮಧ್ಯೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಇಂದು ರಾತ್ರಿ ಚಾಮುಂಡಿ ಬೆಟ್ಟಕ್ಕೆ ಸಂಚಾರ ನಿಷೇಧಿಸಲಾಗಿದೆ.

ಚಾಮುಂಡಿ ಬೆಟ್ಟಕ್ಕೆ ರಾತ್ರಿ 10ರಿಂದ ಬೆಳಗಿನ ಜಾವ 6ರವರೆಗೆ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಹಾಗೆಯೇ ಹಿನಕಲ್ ಫ್ಲೈಓವರ್‌ನಲ್ಲೂ ಕೂಡ ಹೊಸ ವರ್ಷ ಆಚರಣೆ ಹಿನ್ನೆಲೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗವಾಗಿ ಇಂದು ರಾತ್ರಿ 8ರಿಂದ ಬೆಳಗ್ಗೆ 6ರವರೆಗೆ ಎಲ್ಲಾ ರೀತಿಯ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಅಷ್ಟೇ ಅಲ್ಲದೆ ನಗರದ ಹೋಟೆಲ್, ಕ್ಲಬ್, ರೆಸ್ಟೋರೆಂಟ್, ರೆಸಾರ್ಟ್, ಬಾರ್ ಗಳಲ್ಲಿ ಮಧ್ಯರಾತ್ರಿ 1ರವರೆಗೆ ಮದ್ಯ ಸರಬರಾಜು ಮಾಡಬೇಕಾದರೆ ಅಬಕಾರಿ ಇಲಾಖೆ ಅನುಮತಿ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲವಾದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply