ದೆಹಲಿಯಲ್ಲಿ ಭಾರೀ ಮಳೆ- 19 ವಿಮಾನಗಳ ಮಾರ್ಗ ಬದಲಾವಣೆ

ನವದೆಹಲಿ: ಗಾಳಿ ಸಹಿತ ಭಾರೀ ಮಳೆಯಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ನಿರ್ಗಮನ ಮತ್ತು ಆಗಮನದ ಮೇಲೆ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ 19 ವಿಮಾನಗಳ ಮಾರ್ಗ ಬದಲಾವಣೆ ಆಗಿದೆ.

ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ಹವಾಮಾನ ವೈಪರಿತ್ಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಹಲವಾರು ವಿಮಾನಯಾನ ಸಂಸ್ಥೆಗಳು ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ಪ್ರಯಾಣಿಕರಲ್ಲಿ ವಿನಂತಿಸಿದ್ದರು. ಇದೀಗ ದೆಹಲಿಗೆ ತೆರಳಬೇಕಿದ್ದ ವಿಮಾನಗಳ ಮಾರ್ಗ ಬದಲಾವಣೆ ಆಗಿದ್ದು, ಜೈಪುರ, ಲಕ್ನೋ, ಇಂದೋರ್, ಅಮೃತಸರ, ಮುಂಬೈಗೆ ವಿಮಾನಗಳ ಮಾರ್ಗ ಬದಲಾವಣೆ ಆಗಿದೆ. ನವೀಕರಿಸಿದ ವಿಮಾನ ಮಾಹಿತಿಗಾಗಿ ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ಅಧಿಕಾರಿಗಳು ತಿಳಿಸಿದ್ದಾರೆ.

ವಿಮಾನಯಾನ ಕಂಪನಿಗಳು ಟ್ವೀಟ್ ಮಾಡಿ, ದೆಹಲಿಯಲ್ಲಿ ಹವಾಮಾನ ವಿಕೋಪದ ಪರಿಣಾಮದಿಂದಾಗಿ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಮತ್ತು ಆಗಮನದ ಮೇಲೆ ಪರಿಣಾಮ ಬೀರಬಹುದು. ಇದರಿಂದಾಗಿ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ತಮ್ಮ ಪ್ರಯಾಣಿಕರನ್ನು ವಿನಂತಿಸಿದ್ದಾರೆ.

ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ)ಯು ಟ್ವೀಟ್ ಮಾಡಿ, ಮುಂದಿನ ಎರಡು ಗಂಟೆಗಳ ಕಾಲ ದೆಹಲಿಯಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹೇಳಿದೆ. ಇದನ್ನೂ ಓದಿ: ಶಾಲಾ ಪಠ್ಯದಲ್ಲಿ ಕೆಂಪೇಗೌಡ, ಸಿದ್ದರೂಢ ಜಾತ್ರೆ – ಮೋದಿ `ವೋಕಲ್ ಫಾರ್ ಲೋಕಲ್’ ಮಂತ್ರವೂ ಸೇರ್ಪಡೆ

ಇಂದು ಸುರಿದ ಮಳೆಯಿಂದಾಗಿ ದೆಹಲಿಯ ಹಲವು ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ. ಹಲವು ಮರಗಳು ಧರೆಗುರುಳಿದ್ದು, ಇದರಿಂದ ವಾಹನ ಸವಾರರಿಗೆ ತೊಂದರೆ ಉಂಟಾಯಿತು. ಇದನ್ನೂ ಓದಿ: ಮದರಸಾದಲ್ಲಿ ಓದಿದ ಬಳಿಕ ಡಾಕ್ಟರ್, ಇಂಜಿನಿಯರ್ ಆಗಲು ಸಾಧ್ಯವಿಲ್ಲ: ಹಿಮಂತ್ ಬಿಸ್ವಾ ಶರ್ಮಾ

Comments

Leave a Reply

Your email address will not be published. Required fields are marked *