ಒಂದು ತಿಂಗ್ಳ ಹಿಂದೆಯಷ್ಟೇ ಮದ್ವೆಯಾಗಿದ್ದ ನವ ವಿವಾಹಿತ ದುರ್ಮರಣ

ಕೋಲಾರ: ಬೈಕಿನಿಂದ ಆಯತಪ್ಪಿ ಬಿದ್ದ ಪರಿಣಾಮ ನವವಿವಾಹಿತ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ವ್ಯಾಪಮಾನಘಟ್ಟು ಬಳಿ ನಡೆದಿದೆ.

ಕೆಜಿಎಫ್ ತಾಲೂಕಿನ ದೊಡ್ಡಕಾರಿ ನಿವಾಸಿ ತ್ರಿಭೂವನ್ ಕುಮಾರ್ (32) ಮೃತ ದುರ್ದೈವಿ. ಮೃತ ಕುಮಾರ್ ಕೆಜಿಎಫ್ ಸಾರಿಗೆ ವಿಭಾಗದಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ ಮಾಡುತ್ತಿದ್ದರು. ತ್ರಿಭೂವನ್ ಕುಮಾರ್ ಅವರು ಒಂದು ತಿಂಗಳ ಹಿಂದೆಯಷ್ಟೇ ಮದುವೆಯಾಗಿ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಇಂದು ಬೈಕಿನಿಂದ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.

ಮೃತ ತ್ರಿಭೂವನ್ ಕುಮಾರ್ ಇಂದು ಮುಂಜಾನೆ ಕಾಮಸಮುದ್ರಮ್‍ನಲ್ಲಿದ್ದ ಸಹೋದರಿ ಮನೆಯಿಂದ ಕೆಲಸಕ್ಕೆಂದು ಕೆಜಿಎಫ್‍ಗೆ ಹೋಗುತ್ತಿದ್ದರು. ಈ ವೇಳೆ ಬಂಗಾರಪೇಟೆ ತಾಲೂಕಿನ ವ್ಯಾಪಮಾನಘಟ್ಟು ಬಳಿ ಬೈಕಿನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಪರಿಣಾಮ ರಸ್ತೆಯ ಬದಿಯಲ್ಲಿದ್ದ ಕಲ್ಲಿಗೆ ತಲೆ ಹೊಡೆದಿದ್ದು, ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ತ್ರಿಭೂವನ್ ಕುಮಾರ್ ಅವರು ಹೆಲ್ಮೆಟ್ ಧರಿಸದೇ ಬೈಕ್ ಚಾಲನೆ ಮಾಡುತ್ತಿದ್ದರು. ಬೈಕಿನಿಂದ ರಸ್ತೆಗೆ ಬಿದ್ದ ರಭಸಕ್ಕೆ ತಲೆಗೆ ಬಲವಾದ ಏಟು ಬಿದ್ದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *