ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ತವರಿಗೆ ಬಂದು ನವವಿವಾಹಿತೆ ಆತ್ಮಹತ್ಯೆ!

ವಿಜಯಪುರ: ಐದಾರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಡನ ಮನೆಯವರ ಕಿರುಕುಳ ತಾಳಲಾರದೆ ತವರು ಮನೆಗೆ ಬಂದು ತೆರೆದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಅರಸನಾಳ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮೀ ಬೆಳ್ಳಿಕಟ್ಟಿ (20) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಕಳೆದ 6 ತಿಂಗಳ‌ ಹಿಂದಷ್ಟೇ ಬಾಗಲಕೋಟ ಜಿಲ್ಲೆಯ ರಾಂಪೂರದ ಶೇಕಪ್ಪ ಕಾಖಂಡಕಿ ಎಂಬಾತನೊ‍ದಿಗೆ ಮದುವೆ ಮಾಡಿಕೊಡಲಾಗಿತ್ತು. 3-4 ತಿಂಗಳು ಗಂಡನ ಮನೆಯಲ್ಲಿದ್ದು ಕಿರುಕುಳ ತಾಳದೆ ತವರು ಮನೆಗೆ ಬಂದಿದ್ದರು. ಇದನ್ನೂ ಓದಿ: ಕಲಬುರಗಿ ಪಾಲಿಕೆ ಮೇಯರ್-ಉಪಮೇಯರ್ ಚುನಾವಣೆ ಮುಂದೂಡಿಕೆ

ಮತ್ತೆ ಗಂಡನ ಮನೆಗೆ ಕಳಿಸಲು ತವರು ಮನೆಯವರು ಮುಂದಾದಾಗ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಕಳೆದ ಸೋಮವಾರ ಸಂಜೆ ವೇಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಶವಕ್ಕಾಗಿ ಹುಡುಕಾಟ ನಡೆಸಿ ಶವ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಸುಶಾಂತ್ ಸಿಂಗ್ ಕುಟುಂಬದ ಆರು ಮಂದಿ ಸಾವು – ನಾಲ್ವರಿಗೆ ಗಾಯ

POLICE JEEP

ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಆನಂದ ವಾಘ್ಮೋಡೆ, ಪಿಎಸ್ಐ ರೇಣುಕಾ ಜಕನೂರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮುದ್ದೇಬಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *