ಬೆಂಗಳೂರು: ರಾಜ್ಯಾದ್ಯಂತ ಮತ್ತೆ ವರುಣನ ಆರ್ಭಟ ಆರಂಭವಾಗುವ ಸಾಧ್ಯತೆಗಳಿವೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದಲ್ಲಿ ಗಾಳಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮಳೆಯಾಗಲಿದೆ. ಪ್ರಮುಖವಾಗಿ ರಾಜ್ಯದ ಕರಾವಳಿ, ಮಲೆನಾಡು ,ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಅತ್ಯಂತ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು ಕರಾವಳಿ ಭಾಗದ ಜನರಿಗೆ ಎಚ್ಚರಿಕೆ ನೀಡಿದೆ.

ದಕ್ಷಿಣ ಒಳನಾಡಿನ ಭಾಗದಲ್ಲಿ ಕೂಡ ಭಾರಿ ಮಳೆ ನಿರೀಕ್ಷೆಸಲಾಗಿದ್ದು, ಬೆಂಗಳೂರಿನಲ್ಲಿ ಕೂಡ ಗುಡುಗು ಸಹಿತ ಮಳೆಯಾಗಲಿದೆ. ಸೋಮವಾರ ಮಧ್ಯಾಹ್ನದಿಂದಲೇ ಬೆಂಗಳೂರಿನಲ್ಲಿ ಮೂಡ ಮುಸುಕಿದ ವಾತಾವರಣ ನಿರ್ಮಾಣವಾಗಿದೆ. ಸಂಜೆ ವೇಳೆಗೆ ಯಶವಂತಪುರ, ರಾಜಾಜಿನಗರ, ಮಲ್ಲೇಶ್ವರಂ, ಜಾಲಹಳ್ಳಿ, ನೆಲಮಂಗಲ ಭಾಗಗಳಲ್ಲಿ ತುಂತುರು ಮಳೆಯಾಗಿದೆ. ಇಂದು ಬೆಳಗ್ಗೆಯಿಂದಲೂ ನಗರದ ಹಲವೆಡೆ ಮೋಸ ಮುಸುಕಿದ ವಾತಾವಣರವಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply