ಜನರ ಆರೋಗ್ಯದ ಹಿತದೃಷ್ಟಿಯಿಂದ ನೈಟ್ ಕರ್ಫ್ಯೂ ಜಾರಿ ಅವಶ್ಯಕ: ಸಚಿವ ಸಿ.ಸಿ.ಪಾಟೀಲ್

ಗದಗ: ರಾಜ್ಯದಲ್ಲಿ ಓಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಮಿತಿಯ ವರದಿ ಆಧರಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರು 10 ದಿನಗಳ ಕಾಲ ನೈಟ್‌ ಕರ್ಫ್ಯೂ ವಿಧಿಸಿದ್ದಾರೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹೇಳಿದರು.

night curfew

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಾರ್ ಆ್ಯಂಡ್ ರೆಸ್ಟೋರೆಂಟ್, ಪಬ್, ಕ್ಲಬ್, ಹೋಟೆಲ್‌ಗಳಲ್ಲಿ ಜನಜಂಗುಳಿ ಇರುವ ಸಾರ್ವಜನಿಕ ಸ್ಥಳಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಸ್ಥಳವಕಾಶ ನೀಡಿ ಆದೇಶಿಸಿದ್ದಾರೆ. ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ತೆಗದುಕೊಂಡಿದೆ ಎಂದು ತಿಳಿಸಿದರು. ಇದನ್ನೂ ಓದಿ: ಡಿ.28 ರಿಂದ ರಾಜ್ಯದಲ್ಲಿ 10 ದಿನ ನೈಟ್ ಕರ್ಫ್ಯೂ ಜಾರಿ – ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್

ಕೋವಿಡ್ 1 ಮತ್ತು 2ನೇ ಅಲೆಯಲ್ಲಿ ಸ್ನೇಹಿತರು, ಹಿತೈಷಿಗಳು ಮತ್ತು ಕುಟುಂಬಕ್ಕೆ ಆಧಾರಸ್ತಂಭವಾಗಿದ್ದವರನ್ನು ಕಳೆದುಕೊಂಡ ದುಃಖದ ಪರಿಸ್ಥಿತಿಯನ್ನು ಕಣ್ಣಾರೆ‌ ಕಂಡಿದ್ದೇವೆ. ಈ ಬಾರಿ ಅಂತಹ ಪರಿಸ್ಥಿತಿ ಮರುಕಳಿಸಬಾರದು. ಹೀಗಾಗಿ ಮುಖ್ಯಮಂತ್ರಿಗಳು ಜಾರಿ ಮಾಡಿರುವ ಆದೇಶವನ್ನು ನಾವೆಲ್ಲರೂ ತಪ್ಪದೇ ಪಾಲಿಸೋಣ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಹರಿಸೋಣ. ಜನಜೀವನಕ್ಕೆ ಹಾನಿಯಾಗದಂತೆ 3ನೇ ಅಲೆ ನಿಯಂತ್ರಿಸುವಲ್ಲಿ ಯಶಸ್ವಿಯಾಗೋಣ. ಸಾರ್ವಜನಿಕರು ಸರ್ಕಾರದ ಆದೇಶ ಪಾಲಿಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿ ಆಗಲಿ: ಹಂಸಲೇಖ

Comments

Leave a Reply

Your email address will not be published. Required fields are marked *