ವಯಸ್ಸು, ಅನುಭವ ಕಡಿಮೆ, ಹುಡುಗಾಟದ ರಾಜಕಾರಣ ಮಾಡಲ್ಲ: ನಿಖಿಲ್ ಕುಮಾರಸ್ವಾಮಿ

ಮಂಡ್ಯ: ನನಗೆ ವಯಸ್ಸು, ಅನುಭವ ಕಡಿಮೆ. ಆದರೆ ಹುಡುಗಾಟದ ರಾಜಕಾರಣ ಮಾಡುವುದಿಲ್ಲ ಎಂದು ಮಂಡ್ಯ ಲೋಕಸಭಾ ಚುನಾವಣೆಯ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಜಿಲ್ಲೆಯ ಪಾಂಡವಪುರದಲ್ಲಿ ನಡೆದ ಜೆಡಿಎಸ್ ಸಮಾವೇಶ ಮಾತನಾಡಿದ ಅವರು, ನನಗೆ ಟಿಕೆಟ್ ಸಿಗುತ್ತೆ ಎನ್ನುವ ನಿರೀಕ್ಷೆ ಇರಲಿಲ್ಲ. ಆದರೆ ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ಶಾಸಕರು ಒಟ್ಟಾಗಿ ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ನಮ್ಮ ಕುಟುಂಬದ ಬೆಂಬಲಕ್ಕೆ ನಿಂತ ಮಂಡ್ಯ ಜಿಲ್ಲೆಯ ಜನರನ್ನು ನಾವು ಮರೆಯುವುದಿಲ್ಲ. ನಾನು ಏಳು ಜನ್ಮ ಎತ್ತಿ ಬಂದರೂ ಈ ಋಣವನ್ನು ನಾವು ತೀರಿಸುವುದಕ್ಕೆ ಆಗಲ್ಲ ಎಂದರು.

ಸಿನಿಮಾ ರಂಗದಲ್ಲೇ ಮುಂದುವರಿಯಬೇಕೆಂಬ ಆಸೆ ಹೊಂದಿದ್ದೆ. ಆದರೆ ಈಗ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ತಮ್ಮ ಪರವಾಗಿ ಚುನಾವಣೆ ಅಖಾಡಕ್ಕೆ ಇಳಿದಿದ್ದೇನೆ. ಈ ನಿಟ್ಟಿನಲ್ಲಿ ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ. ಅಂದು ಹೆಚ್ಚಿನ ಪ್ರಮಾಣದಲ್ಲಿ ಕಾರ್ಯಕರ್ತರು ಬರಬೇಕು ಎಂದು ಮನವಿ ಮಾಡಿಕೊಂಡರು.

Comments

Leave a Reply

Your email address will not be published. Required fields are marked *