ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

ಭೋಪಾಲ್: ಸಕಾಲದಲ್ಲಿ ಅಂಬುಲೆನ್ಸ್ ಬಾರದ ಕಾರಣ 28 ವರ್ಷದ ಮಹಿಳೆಯೊಬ್ಬರು ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ದೇವಗಾಂವ್ ಗ್ರಾಮದಲ್ಲಿ ನಡೆದಿದೆ.

ರಾಜ್ಯ ಸರ್ಕಾರದ ಜನನಿ ಎಕ್ಸ್‌ಪ್ರೆಸ್ ಅಂಬುಲೆನ್ಸ್ ಗೆ ಕರೆ ಮಾಡಿ ತಿಳಿಸಿದ್ದೆವು. ಆದರೆ ಜನನಿ ಎಕ್ಸ್‌ಪ್ರೆಸ್ ಸರಿಯಾದ ಸಮಯಕ್ಕೆ ಬರಲಿಲ್ಲ. ಹೀಗಾಗಿ ಮಹಿಳೆಯನ್ನು ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಸಾಗಿಸಬೇಕಾಯಿತು ಎಂದು ಮಹಿಳೆಯ ಸಂಬಂಧಿ ಸಂತ್ರಮ್ ಪಟೇಲ್ ಹೇಳಿದ್ದಾರೆ. ಇದನ್ನೂ ಓದಿ: ದಿಢೀರ್ ಎರಡು ಹೋಳಾಗಿ ಧರೆಗುರುಳಿದ ನೂರಾರು ವರ್ಷದ ಅರಳಿಮರ

ನಾನು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಾಲ್ಕು ಬಾರಿ 108 (ಅಂಬುಲೆನ್ಸ್ ಸಹಾಯವಾಣಿ)ಗೆ ಕರೆ ಮಾಡಿದೆ. 10 ನಿಮಿಷದಲ್ಲಿ ಅಂಬುಲೆನ್ಸ್ ಬರುತ್ತೆ ಎಂಬ ಮಾಹಿತಿ ಸಿಕ್ಕಿತು. ಆದರೆ ಎರಡು ಗಂಟೆ ಕಳೆದರೂ ಅಂಬುಲೆನ್ಸ್ ಬರಲಿಲ್ಲ. ಕೊನೆಗೆ ಟ್ರ್ಯಾಕ್ಟರ್ ಟ್ರಾಲಿ ಮೂಲಕ ಆಕೆಯನ್ನು ಅಜಯ್‍ಗಢದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತರುತ್ತಿದ್ದೆವು. ಆದರೆ ಮಾರ್ಗ ಮಧ್ಯದಲ್ಲೇ ಹೆರಿಗೆಯಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರ ವಿರುದ್ಧ ಅವಾಚ್ಯ ಪದ ಬಳಕೆ – ರಮೇಶ್ ಕುಮಾರ್ ವಿಷಾದ ವ್ಯಕ್ತಪಡಿಸಲಿ

ಆದರೆ ಈ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಕ್ರಮತೆಗೆದುಕೊಳ್ಳುತ್ತೇವೆ. ತನಿಖೆ ನಡೆಸುತ್ತೇವೆ ಎಂದು ಮುಖ್ಯ ಆರೋಗ್ಯಾಧಿಕಾರಿ ಆರ್.ಕೆ.ಪಾಂಡೆ ಹೇಳಿದ್ದಾರೆ.

Comments

Leave a Reply

Your email address will not be published. Required fields are marked *