ಗಡಿಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ: ಭಾರತೀಯ ಸೇನೆ

ನವದೆಹಲಿ: ಗಡಿ ನಿಯಂತ್ರಣ ರೇಖೆ  (LoC) ಬಳಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ ಎಂದು ಭಾರತೀಯ ಸೇನೆ (Indian Army) ಸ್ಪಷ್ಟಪಡಿಸಿದೆ.

ಪೂಂಚ್ ಪ್ರದೇಶದಲ್ಲಿ ಕದನ ವಿರಾಮ ಉಲ್ಲಂಘನೆಯ ಕುರಿತು ಕೆಲವು ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ (Social Media) ವರದಿಗಳು ಪ್ರಕಟವಾದ ಬೆನ್ನಲ್ಲೇ ಭಾರತೀಯ ಸೇನೆ ಸ್ಪಷ್ಟನೆ ನೀಡಿ ಈ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದು ಹೇಳಿದೆ.

ಪೂಂಚ್ ವಲಯದಲ್ಲಿ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಪಾಕಿಸ್ತಾನ (Pakistan) ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ಪಾಕ್ ದಾಳಿ ಬೆನ್ನಲ್ಲೇ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದೆ ಎಂದು ವರದಿಯಾಗಿತ್ತು.  ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳ ಪತ್ತೆಗೆ ನೆರವಾಯ್ತು ಬುಲೆಟ್‌ ಶೆಲ್‌ ಟೆಸ್ಟಿಂಗ್‌ – ಬ್ಯಾಲಿಸ್ಟಿಕ್ಸ್‌ ಮ್ಯಾಚಿಂಗ್‌ ಹೇಗೆ ನಡೆಯುತ್ತೆ?

ಸರಿ ಸುಮಾರು ಹದಿನೈದು ನಿಮಿಷಗಳ ಕಾಲ ನಡೆದ ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿಯಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

370 ನೇ ವಿಧಿಯನ್ನು ರದ್ದುಗೊಳಿಸಿದ 6 ನೇ ವಾರ್ಷಿಕೋತ್ಸವ ಇಂದು ನಡೆಯತ್ತಿದೆ. ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಆಗಸ್ಟ್‌ 05, 2019 ರಂದು ರದ್ದುಗೊಳಿಸಿತ್ತು.