ನೋ ಡಿಸ್ಕಷನ್, ಓನ್ಲಿ ಆ್ಯಕ್ಷನ್- ಪ್ರೀತಿ, ಕುಟುಂಬದ ನಡುವೆ ತಾರಕ್

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ `ತಾರಕ್’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ತಾರಕ್ ಚಿತ್ರತಂಡ ದರ್ಶನ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಿದೆ.

ಟ್ರೇಲರ್ ನಲ್ಲಿ ದರ್ಶನ್ ಕ್ಲಾಸಿಕ್, ಸ್ಟೈಲಿಶ್ ಲುಕ್ ಮತ್ತು ಆಕ್ಷನ್ ಮೂಲಕ ಗಮನ ಸೆಳೆದಿದ್ದಾರೆ. `ತಾರಕ್’ ದರ್ಶನ್ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿದ್ದು, ಹಿಂದೆಂದೂ ಕಾಣಿಸಿಕೊಂಡಿರದ ಪಾತ್ರದಲ್ಲಿ ದರ್ಶನ್ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ದರ್ಶನ ರಗ್ಬಿ ಪ್ಲೇಯರ್ ಪಾತ್ರದಲ್ಲಿ ಮಿಂಚಿದ್ದಾರೆ. ತಾರಕ್ ಸಿನಿಮಾವನ್ನು ಮಿಲನ ಪ್ರಕಾಶ್ ನಿರ್ದೇಶಿಸಿದ್ದು, ವಿಶೇಷ ಪಾತ್ರದಲ್ಲಿ ನಟ ದೇವರಾಜ್ ನಟಿಸಿದ್ದಾರೆ. ಶೃತಿ ಹರಿಹರನ್ ಹಾಗೂ ಶಾನ್ವಿ ಶ್ರೀವಾತ್ಸವ್ ಅಭಿನಯಿಸಿದ್ದಾರೆ.

ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದು, ಚಿತ್ರದಲ್ಲಿ ಒಟ್ಟಾರೆ 6 ಹಾಡುಗಳಿವೆ. ಬಾಲಿವುಡ್ ಸಿಂಗರ್ ಅರ್ಮಾನ್ ಮಲ್ಲಿಕ್ ಎರಡು ಹಾಡುಗಳಿಗೆ ಧ್ವನಿಯಾಗಿದ್ದಾರೆ. ಗಾಯಕ ವ್ಯಾಸ್, ವಿಜಯ್ ಪ್ರಕಾಶ್ ಮತ್ತು ಗಾಯಕಿಯರಾದ ಶ್ರೇಯಾ ಘೋಷಾಲ್, ಇಂದು ನಾಗರಾಜ್, ನೀತಿ ಮೋಹನ್ ಕಂಠಸಿರಿಯಲ್ಲಿ ಹಾಡುಗಳು ಮೂಡಿಬಂದಿವೆ.

ಕೇವಲ ಟೀಸರ್ ನಿಂದಾಗಿಯೇ ತಾರಕ್ ಚಿತ್ರ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿತ್ತು. ಅದಕ್ಕೆ ಜೊತೆಯಾಗಿ ಇಂದು ಟ್ರೇಲರ್ ಬಿಡುಗಡೆಯಾಗಿದೆ. ಈಗಾಗಲೇ ಸಿನಿಮಾದ ಟೀಸರ್ 10 ಲಕ್ಷಕ್ಕೂ ಅಧಿಕ ವ್ಯೂವ್‍ಗಳನ್ನು ಪಡೆದುಕೊಂಡಿದೆ.

ಟ್ರೇಲರ್ ನೋಡಿದ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಗುಣಗಾನ ಮಾಡುತ್ತಿದ್ದಾರೆ. ಇದೇ ತಿಂಗಳು 29ರಂದು ತಾರಕ್ ಚಿತ್ರಮಂದಿರಗಳಿಗೆ ಲಗ್ಗೆಯಿಡಲಿದೆ. ಲಹರಿ ಮ್ಯೂಸಿಕ್ ಯೂಟ್ಯೂಬ್ ಖಾತೆಯಲ್ಲಿ ಚಿತ್ರದ ಟ್ರೇಲರ್ ನೀವೂ ನೋಡಬಹುದು.

https://www.youtube.com/watch?v=zo70vGoefEg

Comments

Leave a Reply

Your email address will not be published. Required fields are marked *