ರಾಮಮಂದಿರ ಉದ್ಘಾಟನೆ – ಸರ್ಕಾರಿ ರಜೆ ಘೋಷಣೆ ಮಾಡಲ್ಲ: ಸಿದ್ದರಾಮಯ್ಯ

ತುಮಕೂರು: ಸೋಮವಾರ ರಾಮಮಂದಿರ ಉದ್ಘಾಟನೆ ಹಿನ್ನೆಲೆ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ತುಮಕೂರಿನಲ್ಲಿ ಮಾತನಾಡಿದ ಅವರು, ನಾಳೆ (ಜ.22) ರಾಮಮಂದಿರ ಉದ್ಘಾಟನೆ ಹಿನ್ನೆಲೆ ಎಲ್ಲಾ ಮುಜರಾಯಿ ಇಲಾಖೆ ದೇವಸ್ಥಾನದಲ್ಲಿ ಪೂಜೆ ನಡೆಯಲಿದೆ. ಆದರೆ ಸರ್ಕಾರಿ ರಜೆ ಘೋಷಣೆ ಮಾಡುವುದಿಲ್ಲ ಎಂದು ತಿಳಿಸಿದರು.

ನಾನು ಮಹಾದೇಪುರದಲ್ಲಿ ನಿರ್ಮಾಣ ಆಗಿರುವ ರಾಮಮಂದಿರ ಉದ್ಘಾಟನೆಗೆ ಹೋಗುತ್ತೇನೆ ಎಂದು ಹೇಳಿದರು. ಬೆಂಬಲ ಬೆಲೆ ಕುರಿತು ಮಾತನಾಡಿ, ಕೊಬ್ಬರಿಗೆ ರಾಜ್ಯ ಸರ್ಕಾರದಿಂದ 1,500 ರೂ. ಹೆಚ್ಚುವರಿಯಾಗಿ ಬೆಂಬಲ ಬೆಲೆ ಕೊಟುತ್ತೇವೆ ಎಂದರು.

ರಾಮಮAದಿರದಲ್ಲಿ ಬಾಲರಾಮ ಪ್ರಾಣ ಪ್ರತಿಷ್ಠಾಪನೆ ದಿನ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಿಸಬೇಕು ಎಂದು ಬಿಜೆಪಿ ನಾಯಕರು ಸರ್ಕಾರಕ್ಕೆ ಒತ್ತಾಯಿಸಿದ್ದರು. ಆದರೆ ರಜೆ ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಸಿಎಂ ಹೇಳಿಕೆಗೆ ಬಿಜೆಪಿ ನಾಯಕರು ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ, ರಾಮಭಕ್ತರ ವಿರೋಧಿ ಎಂದು ಟೀಕಿಸಿದ್ದಾರೆ.