ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ : ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ (Raju Kage) ದರ ಏರಿಕೆ ಬಗ್ಗೆ ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯ. ಸದ್ಯ ಬಸ್ ಟಿಕೆಟ್ ದರ ಏರಿಕೆ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ತಿಳಿಸಿದರು.

ಭಾನುವಾರ ಮಾಧ್ಯಮಗಳ ಜೊತೆ ಮಾತನಾಡಿದ್ದ ರಾಜು ಕಾಗೆ ಮತ್ತು ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್‌ (Srinivas) ಅವರು ದರ ಏರಿಕೆಯ ಬಗ್ಗೆ ಮಾತನಾಡಿದ್ದರು. ಇದನ್ನೂ ಓದಿ: ಕೆಆರ್‌ಎಸ್ ಡ್ಯಾಂಗೆ 10,121 ಕ್ಯುಸೆಕ್‌ ಒಳಹರಿವು

ರಾಜು ಕಾಗೆ ಹೇಳಿದ್ದೇನು?
ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಡಿಸೇಲ್ ಹಾಗೂ ಬಸ್ ಬಿಡಿ ಭಾಗಗಳ ದರ ಕೂಡ ಹೆಚ್ಚಾಗಿದೆ. ಕಳೆದ 10 ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಶಕ್ತಿ ಯೋಜನೆಯಿಂದ ನಾವು ನಷ್ಟದಲ್ಲಿದ್ದೇವೆ. ಆದರೂ ನಾವು ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಇದನ್ನೂ ಓದಿ: ಭಾರೀ ಮಳೆಗೆ ಕುಮಾರಧಾರ ಸ್ನಾನಘಟ್ಟ ಮುಳುಗಡೆ – ನದಿಗೆ ಇಳಿಯದಂತೆ ಭಕ್ತಾದಿಗಳಿಗೆ ಸೂಚನೆ

ಶ್ರೀನಿವಾಸ್‌ ಹೇಳಿದ್ದೇನು?
ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ (Ticket Price) ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ (KSRTC) ಸಂಸ್ಥೆ ಉಳಿಯುವುದಿಲ್ಲ. ಸದ್ಯದಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲಾಗುವುದು. ಮೊನ್ನೆ ನಿಗಮದ ಮೀಟಿಂಗ್ ಮುಗಿದಿದ್ದು 15-20% ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸಿಎಂ ಮುಂದೆ ಇಟ್ಟಿದ್ದೇವೆ ಎಂದು ಮಾಹಿತಿ ನೀಡಿದ್ದರು.