ಚಂದ್ರಯಾನ-3 ಲ್ಯಾಂಡರ್‌, ರೋವರ್‌ನಿಂದ ಸಿಗ್ನಲ್‌ ಸಿಗ್ತಿಲ್ಲ: ಇಸ್ರೋ

ನವದೆಹಲಿ: ಚಂದ್ರನಲ್ಲಿ ರಾತ್ರಿ ಅಂತ್ಯವಾಗಿದ್ದು (ಚಂದ್ರನ ಒಂದು ದಿನ ಭೂಮಿಯ 14 ದಿನಕ್ಕೆ ಸಮ), ಸೂರ್ಯೋದಯವಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನಿದ್ರೆಯಲ್ಲಿರುವ ಚಂದ್ರಯಾನ-3 (Chandrayaan-3) ಲ್ಯಾಂಡರ್‌ ಮತ್ತು ರೋವರ್‌ ಎಚ್ಚರಗೊಳಿಸಲು ಇಸ್ರೋ ಪ್ರಯತ್ನ ನಡೆಸುತ್ತಿದೆ. ಆದರೆ ಲ್ಯಾಂಡರ್‌ ಮತ್ತು ರೋವರ್‌ನಿಂದ ಇದುವರೆಗೂ ಯಾವುದೇ ಸಿಗ್ನಲ್‌ ಸಿಕ್ಕಿಲ್ಲ.

ವಿಕ್ರಮ್ ಲ್ಯಾಂಡರ್ (Vikram Lander) ಮತ್ತು ಪ್ರಗ್ಯಾನ್ ರೋವರ್ (Pragna Rover) ಎಚ್ಚರಗೊಳ್ಳುವ ಸ್ಥಿತಿ ಖಚಿತಪಡಿಸಿಕೊಳ್ಳಲು, ಸಂವಹನ ಸ್ಥಾಪಿಸಲು ಪ್ರಯತ್ನ ನಡೆಯುತ್ತಿದೆ ಎಂದು ಭಾರತ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಎಕ್ಸ್‌ನಲ್ಲಿ ತಿಳಿಸಿದೆ. ಇದನ್ನೂ ಓದಿ: ಶಿವಶಕ್ತಿ ಬಿಂದುವಿನಲ್ಲಿ ಲ್ಯಾಂಡರ್, ರೋವರ್ – ವಿಕ್ರಮ್, ಪ್ರಗ್ಯಾನ್‌ಗೆ ಸಿಗುತ್ತಾ ಮರುಜೀವ?

ಎರಡು ವಾರಗಳ ಚಂದ್ರನ ರಾತ್ರಿಯಿಂದಾಗಿ ಲ್ಯಾಂಡರ್ ಮತ್ತು ರೋವರ್ ಅನ್ನು ಸ್ಲೀಪ್ ಮೋಡ್‌ನಲ್ಲಿ ಇರಿಸಲಾಗಿತ್ತು. ಈಗ ಚಂದ್ರನ ದಕ್ಷಿಣ ಧ್ರುವದಲ್ಲಿ ಬೆಳಕಾಗಿದ್ದು, ಸಂಪರ್ಕ ಸ್ಥಾಪಿಸುವ ಪ್ರಯತ್ನ ಮುಂದುವರಿಯಲಿದೆ ಎಂದು ಇಸ್ರೋ ಹೇಳಿದೆ.

ಚಂದ್ರನ ರಾತ್ರಿಯ ಸಮಯದಲ್ಲಿ ಮೈನಸ್ 150C (ಮೈನಸ್ 238F) ವರೆಗೆ ಶೀತ ಹವಾಮಾನ ಇತ್ತು. ಹೀಗಾಗಿ ಲ್ಯಾಂಡರ್‌ ಮತ್ತು ರೋವರ್‌ನೊಂದಿಗೆ ಸಂಪರ್ಕ ಸಾಧಿಸಲು ತೊಂದರೆಯಾಗುತ್ತಿದೆ ಎಂದು ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್‌ ತಿಳಿಸಿದ್ದರು. ಇದನ್ನೂ ಓದಿ: ಗಗನಯಾತ್ರಿಗಳ ಮೈಕ್ರೋಮೀಟೋರಾಯ್ಡ್ ದಿರಿಸುಗಳ ಕೌತುಕ ಲೋಕದ ಬಗ್ಗೆ ನಿಮಗೆ ಗೊತ್ತಾ? 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]