ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಣ್ಸನ್ನೆ ಬೆಡಗಿ ಪ್ರಿಯಾ ವಾರಿಯರ್

ನವದೆಹಲಿ: ಮಲಯಾಳಂನ `ಒರು ಅಡಾರ್ ಲವ್’ ಚಿತ್ರದ ಹಾಡೊಂದರಲ್ಲಿ ತನ್ನ ಕಣ್ ಸನ್ನೆ ಮೂಲಕ ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿರುವ ನಟಿ ಪ್ರಿಯಾ ಪ್ರಕಾಶ್ ವಾರಿಯರ್ ತೆಲಂಗಾಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‍ಐಆರ್ ರದ್ದುಗೊಳಿಸುವಂತೆ ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಿಯಾ ವಾರಿಯರ್ ಅಭಿನಯದ ಒರು ಅಡಾರ್ ಲವ್ ಚಿತ್ರದ ಮಾಣಿಕ್ಯ ಮಲರಾಯ ಪೂವಿ ಹಾಡಿನಲ್ಲಿ ಮುಸಲ್ಮಾನರ ಧಾರ್ಮಿಕ ಭಾವನೆಗೆ ಧಕ್ಕೆ ಆಗುವ ವಿಚಾರಗಳಿವೆ ಎಂದು ಹೈದ್ರಾಬಾದ್‍ನ ಫಲಕ್‍ನಾಮಾ ಠಾಣೆಯಲ್ಲಿ ದೂರು ದಾಖಲಾಗಿದೆ. ಮೊಹಮ್ಮದ್ ಅಬ್ದುಲ್ ಖಾನ್ ತನ್ನ ಸ್ನೇಹಿತರ ಜೊತೆ ದೂರು ದಾಖಲಿಸಿದ್ದು, ಪ್ರವಾದಿ ಕೀರ್ತನೆಗಳನ್ನು ಸಿನಿಮಾ ಹಾಡಿಗೆ ಬಳಸಿರುವುದು ಸರಿಯಲ್ಲ ಎಂದು ದೂರಿನಲ್ಲಿ ಹೇಳಿದ್ದಾರೆ.

ಈ ಬಗ್ಗೆ ಪ್ರಿಯಾ ವಾರಿಯರ್ ತಮ್ಮ ವಿರುದ್ಧ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಿಸದಂತೆ ಮತ್ತು ತನಿಖೆ ನಡೆಸದಂತೆ ತೆಲಂಗಾಣ ರಾಜ್ಯಗಳಿಗೆ ನಿರ್ಬಂಧ ವಿಧಿಸಬೇಕು ಎಂದು ವಕೀಲೆ ಪಲ್ಲವಿ ಪ್ರತಾಪ್ ಮೂಲಕ ಸುಪ್ರೀಂ ಕೋರ್ಟಿಗೆ ಮನವಿ ಮಾಡಿಕೊಂಡು ಅರ್ಜಿ ಸಲ್ಲಿಸಿದ್ದಾರೆ.

ಮಲಯಾಳಂಯೇತರ ರಾಜ್ಯಗಳಲ್ಲಿ ದೂರು ದಾಖಲಿಸಿರುವವರು ಹಾಡನ್ನ ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಪ್ರವಾದಿ ಮಹಮದ್ ಹಾಗೂ ಅವರ ಮೊದಲ ಪತ್ನಿ ಖದೀಜಾ ಅವರ ನಡುವಿನ ಪ್ರೀತಿಯನ್ನು ಹಾಡು ಶ್ಲಾಘಿಸುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಇದು ಜಾನಪದ ಹಾಡು. ಜಬ್ಬಾರ್ ಎಂಬವರು 1978ರಲ್ಲಿ ರಚಿಸಿದ್ದಾರೆ. ಕಳೆದ 40 ವರ್ಷಗಳಿಂದ ಮುಸ್ಲಿಮರು ಇದನ್ನು ಬಳಸುತ್ತಿದ್ದು, ಈಗ ಏಕೆ ವಿರೋಧಿಸುತ್ತಿದ್ದಾರೆ ಎಂದು ಪ್ರಿಯಾ ಪ್ರಶ್ನಿಸಿದ್ದಾರೆ.

ನಿರ್ದೇಶಕ ಒಮರ್ ಅಬ್ದುಲ್ ವಹಾಬ್ `ಒರು ಅಡಾರ್ ಲವ್’ ಸಿನಿಮಾವನ್ನು ನಿರ್ದೇಶಿಸಿದ್ದಾರೆ. ಚಿತ್ರದ 1.32 ಸೆಕೆಂಡ್ ನ ಹಾಡಿನ ವಿಡಿಯೋದಲ್ಲಿ ಪ್ರಿಯಾ ಅವರ ಕಣ್ಣಿನ ನೋಟ ಎಂಥವರನ್ನು ಕ್ಷಣಕಾಲ ಮಗ್ನಗೊಳಿಸುವಂತೆ ಮಾಡುತ್ತದೆ. ಚಿತ್ರದಲ್ಲಿ ಈ ಹಾಡು ತನ್ನ ಹಳೆಯ ಪ್ರೀತಿಯನ್ನು ನೆನಪು ಮಾಡಿಕೊಳ್ಳುವ ಸನ್ನಿವೇಶದಲ್ಲಿ ಮೂಡಿಬಂದಿದೆ. ಹೈಸ್ಕೂಲ್ ನಲ್ಲಿ ಉಂಟಾದ ಮೊದಲ ಲವ್ ಕುರಿತಾಗಿ ಮುಗ್ಧವಾಗಿ ಹಾಡನ್ನು ಚಿತ್ರೀಕರಿಸಲಾಗಿದೆ. ಇದನ್ನು ಓದಿ: ಕಣ್ಸನ್ನೆ ಚೆಲುವೆಗೆ ಪ್ರೇಮಿಗಳ ದಿನದಂದೇ ಸಂಕಷ್ಟ – ಪ್ರಿಯಾ ವಾರಿಯರ್ ಹಾಡಿನ ವಿರುದ್ಧ ಕೇಸ್

Comments

Leave a Reply

Your email address will not be published. Required fields are marked *