ಬೆಳಗಾವಿ: ಹಳೆ ವೈಷಮ್ಯ ಹಿನ್ನೆಲೆಯಲ್ಲಿ ಯುವಕನೋರ್ವನನ್ನು ದುಷ್ಕರ್ಮಿಗಳು ಸ್ಕ್ರೂಡ್ರೈವರ್‌ನಿಂದ (Screwdriver) ಯುವಕನ ಎದೆಗೆ ಚುಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ನಗರದ ಹೊರವಲಯದಲ್ಲಿರುವ ಮಚ್ಚೆ ಬಳಿ ಯಳ್ಳೂರ ರಸ್ತೆಯಲ್ಲಿ ನಡೆದಿದೆ.
ತಾಲೂಕಿನ ಮಜಗಾಂವ ಗ್ರಾಮದ ಪ್ರತೀಕ್ ಲೋಹಾರ್ (21) ಹತ್ಯೆಯಾದ ಯುವಕ. ಬೆಳಗಾವಿ (Belagavi) ನಗರದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಹೋಗುವಾಗ ಹತ್ಯೆ ಮಾಡಲಾಗಿದೆ. ಪ್ರತೀಕ್ ಸ್ನೇಹಿತನ (Friend) ಜೊತೆಗೆ ಕೆಲವರು ಜಗಳ ಆಡುತ್ತಿದ್ದರು. ಈ ವೇಳೆ ಜಗಳ ಬಿಡಿಸಲು ಹೋಗಿದ್ದ ಪ್ರತೀಕ್‌ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಇದನ್ನೂ ಓದಿ: ಪ್ರೀತಂ ಗೌಡರಿಂದ ಭರಪೂರ ಕೊಡುಗೆ – ಬಾಗಿನ ಹೆಸರಲ್ಲಿ ಸೀರೆ, ಬೆಳ್ಳಿಯ ದೇವರ ಫೋಟೋ ಹಂಚಿಕೆ

ಈ ಹಿಂದೆ ಹಲವು ಬಾರಿ ದುಷ್ಕರ್ಮಿಗಳು ಪ್ರತೀಕ್ ಜತೆಗೆ ಜಗಳವಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆತ ಜಗಳ ಬಿಡಿಸಲು ಬರುತ್ತಿದ್ದಂತೆ ಪ್ರತೀಕ್‌ನನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಬೈಕ್‌ನಲ್ಲಿದ್ದ ಸ್ಕ್ರೂಡ್ರೈವರ್‌ನಿಂದ ಎದೆಗೆ ಚುಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಶ್ರದ್ಧಾ ಹತ್ಯೆ ಪ್ರಕರಣ- ಮಾಂಸ ಸಂರಕ್ಷಣೆಯ ತರಬೇತಿ ಪಡೆದಿದ್ದ ಅಫ್ತಾಬ್

Leave a Reply