ಬೆಂಗಳೂರು: ಬಿಎಂಟಿಸಿ ಬಸ್‍ವೊಂದು ಪಾದಚಾರಿ ಮೇಲೆ ಹರಿದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಅತ್ತಿಬೆಲೆ ಗ್ರಾಮದ ಹೊಸೂರು ವೃತ್ತದಲ್ಲಿ ನಡೆದಿದೆ.
ಮೃತ ವೃದ್ಧನ ಕುರಿತು ಯಾವುದೇ ಮಾಹಿತಿ ಸಿಕ್ಕಿಲ್ಲ. ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಾಲಕನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ವಿವರ: ವೃದ್ಧ ಬಸ್‍ಗಾಗಿ ಕಾಯುತ್ತ ಹೊಸೂರು ವೃತ್ತದ ಬಸ್ ನಿಲ್ದಾಣದ ಮುಂದೆ ನಿಂತಿದ್ದು, ಈ ವೇಳೆ ಅಲ್ಲಿಗೆ ಬಿಎಂಟಿಸಿ ಬಂದಿದೆ. ಚಾಲಕ ಪ್ರಯಾಣಿಕರನ್ನು ಇಳಿಸಿ, ತನ್ನ ಮುಂದೆ ಗಮನಿಸದೇ ಬಸ್ ಚಾಲನೆ ಮಾಡಿದ್ದಾನೆ. ಪರಿಣಾಮ ಮುಂದೆ ನಿಂತಿದ್ದ ವೃದ್ಧನ ಮೇಲೆ ಬಸ್ ಹರಿದಿದೆ.
ವೃದ್ಧ ಬಸ್ ಅಡಿಗೆ ಸಿಲುಕಿದ್ದನ್ನು ನೋಡಿದ ಜನರು ತಕ್ಷಣವೇ, ಆತನನ್ನು ಹೊರಗೆ ಏಳೆದು ಬದುಕಿಸಲು ಪ್ರಯತ್ನಿಸಿದ್ದಾರೆ. ಅಂಬುಲೆನ್ಸ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಆದರೆ ವೃದ್ಧ ಸ್ಥಳದಲ್ಲಿಯಲ್ಲಿಯೇ ವೃದ್ಧ ಮೃತಪಟ್ಟಿದ್ದಾನೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಬಳಿಕ ಶವವನ್ನು ಅಂಬುಲೆನ್ಸ್ ನಲ್ಲಿ ಶವವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ.
ಈ ಕುರಿತು ಹತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಬಳಿ ಯಾವುದೇ ಗುರುತಿನ ಚೀಟಿ ಸಿಕ್ಕಿಲ್ಲ. ಇತ್ತ ಬಸ್ ಚಾಲಕನನ್ನು ವಶಕ್ಕೆ ಪಡೆದು ಅಪಘಾತದ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply