ಕರ್ತವ್ಯ ನಿರತ ಪೊಲೀಸ್ ಪೇದೆ ಹೃದಯಾಘಾತದಿಂದ ಸಾವು

ಬೀದರ್: ಕರ್ತವ್ಯ ನಿರತ ಪೊಲೀಸ್ ಪೇದೆ (Police Constable) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಬೀದರ್ (Bidar) ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ರಾಯಚೂರು (Raichur) ಮೂಲದ ಪೇದೆ ಇಂದು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಂದ್ರಶೇಖರ್ (29) ಮೃತ ಪೊಲೀಸ್ ಪೇದೆ. ಇವರು ಕಳೆದ ಐದು ವರ್ಷಗಳಿಂದ ಬೀದರ್‌ನಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಮುಡಾ ಆಯುಕ್ತರನ್ನು ಬಂಧಿಸಬೇಕು – ಕೇಂದ್ರ ಸಚಿವ ಹೆಚ್‌ಡಿಕೆ ಆಗ್ರಹ

ನಗರದ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರಶೇಖರ್ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಗಾಂಧಿ ಜಯಂತಿಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಸಂದರ್ಭ ಪೇದೆಗೆ ಹೃದಯಾಘಾತವಾಗಿದ್ದು, ಕೂಡಲೇ ಬ್ರಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಪೊಲೀಸ್ ಪೇದೆ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bihar | ಸೇನೆಯ ಹೆಲಿಕಾಪ್ಟರ್‌ ಇಂಜಿನ್‌ ವೈಫಲ್ಯ – ಪ್ರವಾಹದ ನೀರಲ್ಲೇ ತುರ್ತು ಭೂಸ್ಪರ್ಶ