ಕಾರವಾರ | ಹಳ್ಳಕ್ಕೆ ಬಿದ್ದ ಖಾಸಗಿ ಬಸ್ – ಓರ್ವ ಸಾವು, ಐವರು ಗಂಭೀರ

ಕಾರವಾರ: ಬೆಂಗಳೂರಿನಿಂದ ಮಂಗಳೂರಿನ ಕಡೆ ತೆರಳುತ್ತಿದ್ದ ಖಾಸಗಿ ಬಸ್ (Private Bus) ಹಳ್ಳಕ್ಕೆ ಬಿದ್ದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಐವರು ಗಂಭೀರ ಗಾಯಗೊಂಡಿರುವ ಘಟನೆ ಅಂಕೋಲದ (Ankola) ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು ಬಳಿ ನಡೆದಿದೆ.

ಬೆಂಗಳೂರಿನಿಂದ ಮಂಗಳೂರು ಕಡೆ 18 ಜನರನ್ನು ಕರೆದೊಯ್ಯುತ್ತಿದ್ದ ವೇಳೆ ಅತೀ ವೇಗದಲ್ಲಿ ಬಂದ ಬಸ್ ಅಗಸೂರಿನ ಹೆದ್ದಾರಿಯ ಬ್ರಿಡ್ಜ್ ತಡೆಗೋಡೆಗೆ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದಿದೆ. ಪರಿಣಾಮ ಬಸ್‌ನಲ್ಲಿದ್ದ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದಾರೆ. ಉಳಿದವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಕತ್ರಾ ಮಾತಾ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತ – ನಾಲ್ವರಿಗೆ ಗಾಯ

ಗಂಭೀರ ಗಾಯಗೊಂಡವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಉಳಿದವರಿಗೆ ಅಂಕೋಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮೃತನ ಗುರುತು ಪತ್ತೆಯಾಗಬೇಕಿದೆ. ಇದನ್ನೂ ಓದಿ: ಮುಡಾ ಕೇಸ್ | ಸಿಎಂ ಪತ್ನಿ ವಿಚಾರಣೆ ರದ್ದು – ನಿಮ್ಮನ್ಯಾಕೆ ರಾಜಕೀಯಕ್ಕೆ ಬಳಕೆ ಮಾಡ್ತಾರೆ?: ಇ.ಡಿಗೆ ಸುಪ್ರೀಂ ಛೀಮಾರಿ

ಸ್ಥಳಕ್ಕೆ ಅಂಕೋಲ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಕ್ರೇನ್ ಮೂಲಕ ಬಸ್ಸನ್ನು ಹಳ್ಳದಿಂದ ಮೇಲಕ್ಕೆತ್ತಿದ್ದಾರೆ. ಘಟನೆ ಸಂಬಂಧ ಅಂಕೋಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.