ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ

ಹೈದರಾಬಾದ್: ತೆಲಂಗಾಣದಲ್ಲಿ ಬೆಟ್ಟಿಂಗ್ ಆಪ್ ಪ್ರಕರಣ ಸಂಚಲನ ಸೃಷ್ಟಿಸಿದೆ. ಇಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟ ರಾಣಾ ದಗ್ಗುಬಾಟಿ (Rana Daggubati) ಇಡಿ (ED) ವಿಚಾರಣೆಗೆ ಹಾಜರಾಗಿದ್ದಾರೆ. ಹೈದರಾಬಾದ್‌ನ (Hyderabad) ಬಶೀರ್‌ಬಾಗ್‌ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಇಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ಕೊಟ್ಟಿದ್ದರು. ರಾಣಾ ವಿವಿಧ ಆನ್‌ಲೈನ್ ಬೆಟ್ಟಿಂಗ್ (Online Betting) ಆಪ್‌ಗಳನ್ನು ಪ್ರಚಾರ ಮಾಡಿದ್ದಾರೆ ಎಂಬ ಆರೋಪಗಳ ಹಿನ್ನೆಲೆ ನೋಟೀಸ್ ನೀಡಿತ್ತು. ಈಗಾಗಲೇ ನಟರಾದ ವಿಜಯ್ ದೇವರಕೊಂಡ, ಪ್ರಕಾಶ್ ರಾಜ್ ಇಡಿ ವಿಚಾರಣೆಗೆ ಹಾಜರಾಗಿದ್ದರು. ಇದನ್ನೂ ಓದಿ: ಕಾಲ್ತುಳಿತಕ್ಕೆ ಸಿಎಂ, ಡಿಸಿಎಂ, ಗೃಹ ಸಚಿವರೇ ಕಾರಣ – ಪೊಲೀಸರ ಮೇಲೆ ತಪ್ಪು ಹೊರಿಸಿ ನುಣುಚಿಕೊಳ್ಳುವ ಯತ್ನ: ವಿಜಯೇಂದ್ರ

ಇನ್ನೂ ನಟಿ ಮಂಚು ಲಕ್ಷ್ಮಿ ಆಗಸ್ಟ್ 13ಕ್ಕೆ ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಇದನ್ನೂ ಓದಿ: ಈ ವರ್ಷ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಸ್ಥಾಪನೆ ಇಲ್ಲ: ಹೈಕೋರ್ಟ್‌ಗೆ ಎಜಿ ಶಶಿಕಿರಣ್‌ ಶೆಟ್ಟಿ ಸ್ಪಷ್ಟನೆ