Kolar | ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ ದಂಧೆ – ಓರ್ವ ಆರೋಪಿ ಬಂಧನ

ಕೋಲಾರ: ಆನ್‌ಲೈನ್ ಮೂಲಕ ಕ್ರಿಕೆಟ್ ಬೆಟ್ಟಿಂಗ್ (Online Cricket Betting) ದಂಧೆ ನಡೆಸುತ್ತಿದ್ದ ಆರೋಪಿಯನ್ನು ಕೋಲಾರ ಸೈಬರ್ ಅಪರಾಧ ಹಾಗೂ ಮಾದಕ ವಸ್ತುಗಳ ನಿಯಂತ್ರಣ ಠಾಣೆ (ಸೆನ್) ಪೊಲೀಸರು ಬಂಧಿಸಿರುವ ಘಟನೆ ಕೋಲಾರ (Kolar) ಜಿಲ್ಲೆಯ ಮುಳಬಾಗಿಲು (Mulabagilu) ನಗರದಲ್ಲಿ ನಡೆದಿದೆ.

ಮುಳಬಾಗಿಲು ನಗರದ ನೂಕಲಬಂಡೆಯ ನಿವಾಸಿ ಸೈಯದ್ ಸಾದಿಕ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ. ಆರೋಪಿ ಸಾರ್ವಜನಿಕರಿಂದ ನಗದು ರೂಪದಲ್ಲಿ ಹಾಗೂ ಆನ್‌ಲೈನ್‌ನಲ್ಲಿ ವರ್ಗಾವಣೆ ಮಾಡಿಸಿಕೊಂಡು ಆನ್‌ಲೈನ್ ಕ್ರಿಕೆಟ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳ ಮೂಲಕ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ನಡೆಸುತ್ತಿದ್ದ. ಆರೋಪಿ ಬಳಿ ಇದ್ದ ಎರಡು ಮೊಬೈಲ್‌ಗಳು, ನಗದು ಹಾಗೂ ಬ್ಯಾಂಕ್ ಖಾತೆಯಲ್ಲಿದ್ದ 32,046 ರೂ. ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ನಾವು ನೆಮ್ಮದಿಯಿಂದ ಬದುಕಬೇಕು.. ನೀನು ಬಂದು ಶರಣಾಗು: ಉಗ್ರ ಪುತ್ರನಿಗೆ ತಾಯಿ ಮನವಿ

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಕೈಗೊಂಡಿದ್ದಾರೆ. ಇನ್ನೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಮಾರ್ಗದರ್ಶನದಲ್ಲಿ ಸೆನ್ ಠಾಣೆಯ ಡಿವೈಎಸ್‌ಪಿ, ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಇನ್ನೂ ಜಿಲ್ಲೆಯಲ್ಲಿ ಬೆಟ್ಟಿಂಗ್ ದಂಧೆ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರು ಕೋಲಾರ ಸೆನ್ ಪೊಲೀಸ್ ಠಾಣೆಗೆ ಮಾಹಿತಿ ನೀಡಲು ಕೋರಿದ್ದಾರೆ. ಇದನ್ನೂ ಓದಿ: ಸಫಾರಿಗೆ ಹೋಗಿದ್ದ ಪ್ರವಾಸಿಗರಿಗೆ ಮಲೆ ಮಹದೇಶ್ವರ ವನ್ಯಧಾಮದ ಸುಂಕದ ಕಟ್ಟೆಯಲ್ಲಿ ಹುಲಿ ದರ್ಶನ