ಆನ್‍ಲೈನ್ ಗೇಮ್‍ನಿಂದ 65 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ಯುವಕ ಆತ್ಮಹತ್ಯೆ

ಕಾರವಾರ: ಆನ್ ಲೈನ್ ಗೇಮ್ ಚಟದಿಂದಾಗಿ ಲಕ್ಷಾಂತರ ರೂ. ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ ಮಾಡಿಕೋಮಡ ಘಟನೆ ಉತ್ತರಕನ್ನಡದಲ್ಲಿ ನಡೆದಿದೆ.

ವಿಜೇತ್ ಶಾಂತಾರಾಮ ಹೆಗಡೆ (37) ಎಂಬಾತ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈ ಘಟನೆ ಶಿರಸಿ ತಾಲೂಕಿನ ಕುಳವೆ ಬಳಿ ನಡೆದಿದೆ. ಇದನ್ನೂ ಓದಿ: ಬಾವಿಯಲ್ಲಿ ಯುವತಿ ಶವ ಪತ್ತೆ

ಶುಕ್ರವಾರ ಮನೆಯಿಂದ ಬೆಂಗಳೂರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೊರಟಿದ್ದ ಯುವಕ ಮತ್ತೆ ಮನೆಗೆ ವಾಪಸ್ಸಾಗಿಲ್ಲ. ಆ ಬಳಿಕ ಡೆತ್‍ನೋಟ್ ಬರೆದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬಯಲಾಗಿದೆ.

ವಿಜೇತ್ ಸುಮಾರು 65 ಲಕ್ಷ ರೂ. ಗೂ ಹೆಚ್ಚಿನ ಹಣವನ್ನು ಆನ್ ಲೈನ್ ಗೇಮ್‍ನಲ್ಲಿ ಕಳೆದುಕೊಂಡಿದ್ದ ಎಂಬ ಮಾಹಿತಿ ಸಿಕ್ಕಿದೆ. ಈ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]