ಜ್ಯೋತಿಷಿಯ ಸಲಹೆಯ ಮೇರೆಗೆ ಬಿಎಸ್‍ವೈಯಿಂದ ಆಪರೇಷನ್ ಕಮಲ ತಂತ್ರ!

ಬೆಂಗಳೂರು: ಕೇರಳ ಮೂಲದ ಜ್ಯೋತಿಷಿಯೊಬ್ಬರ ಸಲಹೆಯ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದೆಹಲಿಯಲ್ಲಿ ಕುಳಿತುಕೊಂಡೇ ಆಪರೇಷನ್ ಕಮಲಕ್ಕೆ ಕೈ ಹಾಕಿದ್ದಾರೆ ಎನ್ನುವ ವಿಚಾರ ಈಗ ಬೆಳಕಿಗೆ ಬಂದಿದೆ.

ನಿಮ್ಮ ಗ್ರಹಗತಿ ಬದಲಾಗಿದೆ. ನೀವು ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಜನವರಿ 15ರ ಸಂಕ್ರಾಂತಿ ನಂತರ ನಿಮಗೆ ತುಂಬಾ ಒಳ್ಳೆಯದಾಗುತ್ತೆ ಎಂದು ಯಡಿಯೂರಪ್ಪ ಅವರಿಗೆ ಕೇರಳ ಮೂಲದ ಜ್ಯೋತಿಷಿಯೊಬ್ಬರು ಸಲಹೆ ಕೊಟ್ಟಿದ್ದಾರೆ.

ಜ್ಯೋತಿಷಿಯ ಮಾತು ಕೇಳಿ ಕೂಡಲೇ ಕಾರ್ಯಪ್ರವೃತ್ತರಾದ ಬಿಎಸ್‍ವೈ ಆಪರೇಷನ್ ಕಮಲಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ನಾಳೆ ಅಂದರೆ ಶನಿವಾರ ನಿಮಗೆ ಒಳ್ಳೆಯ ದಿನ ಎಂದು ಜ್ಯೋತಿಷಿ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ನಾಳೆ ಸಿಹಿ ಸುದ್ದಿ ನಿಶ್ಚಿತ ಎಂಬ ನಿರೀಕ್ಷೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಕಾಯುತ್ತಿದ್ದಾರೆ.

ಈಗಾಗಲೇ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದು ತನಗೆ ಸಿಕ್ಕ ಮೊದಲ ಜಯ ಎಂದು ಬಿಎಸ್‍ವೈ ಭಾವಿಸಿದ್ದು, ಈಗ ಕಾಂಗ್ರೆಸ್ಸಿನ ಅತೃಪ್ತ ಶಾಸಕರನ್ನು ತಮ್ಮತ್ತ ಸೆಳೆದು ರಾಜೀನಾಮೆ ಕೊಡಿಸುವ ಯೋಜನೆ ರೂಪಿಸುತ್ತಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *