ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 62ಕ್ಕೆ ಏರಿಕೆ ಮಾಡಿದ ಆಂಧ್ರ ಸರ್ಕಾರ

ಅಮರಾವತಿ: ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 60 ವರ್ಷದಿಂದ 62 ವರ್ಷಕ್ಕೆ ಏರಿಸುವ ಸುಗ್ರೀವಾಜ್ಞೆಯನ್ನು ಆಂಧ್ರಪ್ರದೇಶದ ಜಗನ್ ಮೋಹನ್ ರೆಡ್ಡಿ ಸರ್ಕಾರ ಇಂದು ಹೊರಡಿಸಿದೆ.

ಈ ನಿಯಮ ಜನವರಿ 1, 2022ರಿಂದಲೇ ಜಾರಿಗೆ ಬರುವಂತೆ ಕ್ರಮವಹಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಸರ್ಕಾರ ನಿರ್ಧಾರವು ನೌಕರರಲ್ಲೂ ಅಚ್ಚರಿ ಮೂಡಿಸಿದೆ. ನಿವೃತ್ತಿ ವಯಸ್ಸನ್ನು ಹೆಚ್ಚಿಸಿ ಎಂದು ಸರ್ಕಾರಿ ನೌಕರರು ಯಾರೂ ಪ್ರತಿಭಟನೆ ಮಾಡಿಲ್ಲ. ಆದರೂ ಸರ್ಕಾರ ನಿವೃತ್ತಿ ವಯಸ್ಸನ್ನು ಹೆಚ್ಚಿಸಿದೆ.

ಈ ಹಿಂದೆ ತೆಲಂಗಾಣ ಮತ್ತು ಮಧ್ಯಪ್ರದೇಶದಲ್ಲೂ ನೌಕರರ ನಿವೃತ್ತಿ ವಯಸ್ಸನ್ನು ಏರಿಸಿವೆ. ತೆಲಂಗಾಣದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 61ಕ್ಕೆ ಹೆಚ್ಚಿಸಲಾಗಿದೆ. ಮಧ್ಯಪ್ರದೇಶದಲ್ಲಿ ನಿವೃತ್ತಿ ವಯಸ್ಸು 62. ಕೇಂದ್ರ ಸರ್ಕಾರದಲ್ಲಿ ಸರ್ಕಾರಿ ನೌಕರರ ನಿವೃತ್ತಿ ವಯಸ್ಸು 60 ಆಗಿದೆ. ಆದರೆ ಇದೀಗ ಆಂಧ್ರಪ್ರದೇಶ ಸರ್ಕಾರ ನಿವೃತ್ತಿ ವಯಸ್ಸನ್ನು 2 ವರ್ಷ ಮುಂದೆ ಹಾಕಿದೆ.

ಕೆಲವರು ದಕ್ಷಿಣ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣಿಸುತ್ತಿರುವುದರಿಂದ ಆಂಧ್ರ ರಾಜ್ಯದ ನೌಕರರ ನಿವೃತ್ತಿ ವಯಸ್ಸನ್ನು 62ಕ್ಕೆ ಹೆಚ್ಚಿಸುವ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಆಂಧ್ರಪ್ರದೇಶದ ಸರ್ಕಾರಿ ನೌಕರರ ಭವಿಷ್ಯ ನಿಧಿ, ಗ್ರಾಚ್ಯುಟಿ ಮತ್ತು ಇತರ ಪ್ರಯೋಜನಗಳು ಸರಾಸರಿ ಸುಮಾರು 30 ಲಕ್ಷ ರೂ. ಆಗಿದೆ. ಅನೇಕ ಸಿಬ್ಬಂದಿಗೆ ನಿವೃತ್ತಿ ಪ್ರಯೋಜನಗಳ ಪಾವತಿಯನ್ನು ಎರಡು ವರ್ಷಗಳವರೆಗೆ ಮುಂದೂಡಬಹುದು. ಪಿಂಚಣಿ ಹಾಗೂ ಇತರ ನಿವೃತ್ತಿ ಪ್ರಯೋಜನಗಳ ಮೇಲೆ ಸರ್ಕಾರವು ಮಾಡುವ ವೆಚ್ಚವನ್ನು ಮುಂದೂಡುತ್ತದೆ. ಇದನ್ನೂ ಓದಿ: ಕಾಂಗ್ರೆಸ್ ಬಿಡೋರ ಲಿಸ್ಟ್, ಬಿಜೆಪಿ ಬಿಡೋರ ಲಿಸ್ಟ್ ನನ್ನ ಬಳಿ ಇದೆ: ಯತ್ನಾಳ್

Comments

Leave a Reply

Your email address will not be published. Required fields are marked *