ರಾಮನಗರ: ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದು ನಮ್ಮ ಉದ್ದೇಶ ಎಂದು ಜಲ ಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು, ಸರ್ಕಾರವನ್ನೇ ಒಟ್ಟಾಗಿ ಮಾಡಿದ್ದೇವೆ. ಹೀಗಾಗಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳದಿದ್ದರೂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಆಯ್ಕೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳುತ್ತೇವೆ ಎಂದು ತಿಳಿಸಿದರು.
ಈ ಬಗ್ಗೆ ಯಡಿಯೂರಪ್ಪ ಅವರು ಏನೂ ಬೇಕಾದರೂ ಮಾತನಾಡಿಕೊಳ್ಳಲಿ. ಚುನಾವಣೆಯಲ್ಲಿ ಏನು ಬೇಕೊ ಹಾಗೆ ಮಾತನಾಡಿದ್ದರು. ಏನೂ ಮಾಡಿದರೂ ಎಲ್ಲಿ ಹಣ ಬಲ ತೋಳ್ ಬಲ ತೋರಿಸಿದ್ದರು ಗೊತ್ತಿದೆ. ಹೀಗಾಗಿ ರಾಜ್ಯದ ಜನರು ಇದಕ್ಕೆ ಉತ್ತರ ನೀಡಿದ್ದಾರೆ. ಇದರಿಂದ ಹತಾಶರಾಗಿ ಯಡಿಯೂರಪ್ಪ ಅವರು ಈ ರೀತಿಯಾಗಿ ಮಾತನಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದರು.
ಸಿದ್ದರಾಮಯ್ಯ ಅವರ ಯೂರೋಪ್ ಪ್ರವಾಸ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅವರು, ವೈಯಕ್ತಿಕವಾಗಿ ಅವರು ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಕೆಲ ಶಾಸಕರು, ಸಚಿವರು ಅಮೆರಿಕದ ಅಕ್ಕ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅವರೊಂದಿಗೆ ಹೋಗಿದ್ದಾರೆ ಅಷ್ಟೇ. ಅದರಲ್ಲಿ ಕೆಲವರು ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲಿದ್ದಾರೆ. ಇದಕ್ಕೆ ಯಾವುದೇ ಬೇರೆ ಅರ್ಥ ಮಾಡಿಕೊಳ್ಳುವುದು ಬೇಡ ಎಂದು ಪ್ರತಿಕ್ರಿಯಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply