ಸಿಡಿಲು ಬಡಿದು ಜೋಡಿ ಎತ್ತುಗಳು ಸಾವು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಐದಬಾವಿ ಗ್ರಾಮದಲ್ಲಿ ಸಿಡಿಲು ಬಡಿದು ಜೋಡಿ ಎತ್ತುಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ನಿನ್ನೆ ರಾತ್ರಿ ಸಿಡಿಲು ಬಡಿದ ಹಿನ್ನೆಲೆ ಕೊಟ್ಟಿಗೆಯಲ್ಲಿ ಕಟ್ಟಿದ್ದ ಎತ್ತುಗಳು ಸಾವಿಗೀಡಾಗಿವೆ. ಗ್ರಾಮದ ರೈತ ನಿಂಗಪ್ಪ ಎಂಬವವರಿಗೆ ಸೇರಿದ ಎತ್ತುಗಳು ಸಿಡಿಲಿಗೆ ಬಲಿಯಾಗಿವೆ.

ಜಮೀನಿನಲ್ಲೇ ಗುಡಿಸಲು ಹಾಕಿಕೊಂಡಿದ್ದ ರೈತ ಕುಟುಂಬ, ಎತ್ತುಗಳಿಗೆ ಹೊಲದಲ್ಲಿ ಕೊಟ್ಟಿಗೆ ನಿರ್ಮಿಸಿದ್ದರು. ರಾತ್ರಿ ವೇಳೆ ಸಿಡಿಲು ಬಡಿದು ಎತ್ತುಗಳು ಸಾವನ್ನಪ್ಪಿದ್ದು, ರೈತ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರ Connecting People ಆಗಿದೆ: ಹೆಚ್. ವಿಶ್ವನಾಥ್

ತಲಾ ಒಂದು ಲಕ್ಷ ಬೆಲೆ ಬಾಳುವ ಎರಡು ಎತ್ತುಗಳನ್ನ ಕಳೆದುಕೊಂಡು ರೈತ ನಿಂಗಪ್ಪ ಕಂಗಾಲಾಗಿದ್ದಾರೆ. ಕುಟುಂಬಕ್ಕೆ ಆಸರೆಯಾಗಿದ್ದ ಎತ್ತುಗಳು ಸಾವನ್ನಪ್ಪಿದ್ದರಿಂದ ಇಡೀ ಕುಟುಂಬ ಕಣ್ಣೀರಿಟ್ಟಿದೆ. ಲಿಂಗಸುಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Comments

Leave a Reply

Your email address will not be published. Required fields are marked *