ಧಗ ಧಗಿಸುವ ಪೈಲ್ವಾನನ ಹೊಸ ಲುಕ್ ಔಟ್

ಬೆಂಗಳೂರು: ಸ್ಯಾಂಡಲ್‍ವುಡ್ ಮಾಣಿಕ್ಯ ಸುದೀಪ್ ನಟನೆಯ ಪೈಲ್ವಾನ ಚಿತ್ರದ ಹೊಸ ಲುಕ್ ರಿವೀಲ್ ಆಗಿದೆ. ಪೈಲ್ವಾನ ಚಿತ್ರದಲ್ಲಿ ಬಾಕ್ಸರ್ ಆಗಿ ಕಾಣಿಸಿಕೊಂಡಿರುವ ರನ್ನನ ಹೊಸಫೋಟೋ ನೋಡಲು ಅಭಿಮಾನಿಗಳು ಕಾತುರರಾಗಿದ್ದರು. ಇಂದು ಸುದೀಪ್ ತಮ್ಮ ಟ್ವಟ್ಟರ್ ಖಾತೆಯಲ್ಲಿ ಫೋಟೋ ಹಾಕಿಕೊಂಡಿದ್ದು, ಅಭಿಮಾನಿಗಳು ವಾವ್, ಸೂಪರ್ ಎಂದು ಪ್ರತಿಕ್ರಿಯೆ ನೀಡಲು ಆರಂಭಿಸಿದ್ದಾರೆ.

ಕಟ್ಟುಮಸ್ತಾದ ಕುಸ್ತಪಟುವಿನ ಪಾತ್ರದಲ್ಲಿರುವ ಸುದೀಪ್ ಮೊದಲ ಬಾರಿಗೆ ಸಿಕ್ಸ್ ಪ್ಯಾಕ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇದುವರೆಗೂ ಯಾವ ಸಿನಿಮಾದಲ್ಲಿ ಸುದೀಪ್ ತಮ್ಮ ಶರ್ಟ್ ತೆಗೆದಿರಲಿಲ್ಲ. ಮೊದಲ ಬಾರಿಗೆ ಪೈಲ್ವಾನ ಚಿತ್ರಕ್ಕಾಗಿ ದೇಹವನ್ನು ಹುರಿಗೊಳಿಸಿಕೊಂಡಿರು ಕಿಚ್ಚನ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಪೈಲ್ವಾನ್ ಚಿತ್ರಕ್ಕಾಗಿ ಸುದೀಪ್ ಮಾಂಸಾಹಾರವನ್ನ ತ್ಯಜಿಸಿ ಮೈಕಟ್ಟನ್ನು ಹುರಿಗೊಳಿಸಿದ್ದಾರೆ. ಮೊದಲ ಬಾರಿಗೆ ಪೈಲ್ವಾನನಾಗಿ ಕಾಣಿಸಿಕೊಳ್ಳುತ್ತಿರುವ ಮಾಣಿಕ್ಯ ಚಿತ್ರದಲ್ಲಿ ಕುಸ್ತಿ ದೃಶ್ಯಗಳು ಇರಲಿವೆ. ಈ ಹಿಂದೆ ಪೈಲ್ವಾನ್ ಸೆಟ್ ಚಿತ್ರದ ಒಂದು ಫೋಟೋ ಹಲವು ಪ್ರಶ್ನೆಗಳನ್ನು ಹುಟ್ಟುಹಾಕುವುದರ ಜೊತೆ ಕುತೂಹಲವನ್ನು ಹೆಚ್ಚು ಮಾಡಿತ್ತು. ಈಗ ಕುಸ್ತಿ ಅಖಾಡದ ಫೋಟೋಗಳು ರಿವೀಲ್ ಆಗಿವೆ. ಚಿತ್ರೀಕರಣಕ್ಕಾಗಿ ಚಿತ್ರತಂಡ ಕುಸ್ತಿ ಅಖಾಡದ ಸೆಟ್ ನಿರ್ಮಾಣ ಮಾಡಿದೆ.

ಗಜಕೇಸರಿ ಕೃಷ್ಣ ನಿರ್ದೇಶನದಲ್ಲಿ ಪೈಲ್ವಾನ್ ಮೂಡಿ ಬರುತ್ತಿದ್ದು, ಚಿತ್ರದ ಮೇಕಿಂಗ್ ನೋಡಿ ತೆಲುಗು, ತಮಿಳು, ಮಲೆಯಾಳಂ, ಪಂಜಾಬಿ, ಬೆಂಗಾಲಿ, ಮರಾಠಿ, ಭೋಜ್‍ಪುರಿ ವಿತರಕರು ಡಬ್ಬಿಂಗ್ ಮಾಡಲು ಮುಂದಾಗಿದ್ದಾರಂತೆ. ಈಗಾಗಲೇ ಸುದೀಪ್ ಅಪ್ತ ರಿತೇಶ್ ದೇಶಮುಖ್ ಹಿಂದಿಯಲ್ಲಿ ಪೈಲ್ವಾನ್ ರಿಲೀಸ್ ಮಾಡಲು ಒಪ್ಪಿಕೊಂಡಿದ್ದಾರಂತೆ. ಒಟ್ಟು 30ರಿಂದ 40 ಕೋಟಿ ರೂ. ಬಜೆಟ್ ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ.

ಸಿನಿಮಾದಿಂದ ಸಿನಿಮಾಕ್ಕೆ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳುವ ಸುದೀಪ್ ಅಭಿಮಾನಿಗಳು ಥ್ರಿಲ್ ಆಗುವಂತೆ ಮಾಡುತ್ತಾರೆ. ಇತ್ತೀಚೆಗೆ ಬಿಡುಗಡೆಯಾಗಿದ್ದ ‘ದಿ ವಿಲನ್’ ಸಿನಿಮಾದಲ್ಲಿ ಭಿನ್ನ ವಿಭಿನ್ನ ಲುಕ್ ನಲ್ಲಿ ಮಿಂಚಿದ್ದರು. ದಿ ವಿಲನ್ ಫಸ್ಟ್ ಲುಕ್ ಔಟ್ ಆದಾಗಲೇ ಅಭಿಮಾನಿಗಳು ಕಿಚ್ಚನ ಹೇರ್ ಸ್ಟೈಲ್ ಫಾಲೋ ಮಾಡಲಾರಂಭಿಸಿದ್ದರು. ದಿ ವಿಲನ್ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆದ್ಮೇಲೆಯೂ ಸುದೀಪ್ ಹೇರ್ ಸ್ಟೈಲ್ ಬಹುತೇಕರು ಅನುಸರಿಸುತ್ತಿದ್ದಾರೆ.

https://www.youtube.com/watch?v=SjnO6D0JtJc

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *