ಒಟ್ಟೋವಾ: ಕೆನಡಾದಲ್ಲಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಕೆನಡಾದ ಕನ್ನಡಿಗ ಸಂಸದ ಚಂದ್ರ ಆರ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ಕಾಳಿದೇವಿ ಸಾಕ್ಷ್ಯಚಿತ್ರ ವಿವಾದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ಅವರು, ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಅವರ ಕಾಳಿ ಕುರಿತಾದ ಸಾಕ್ಷ್ಯಚಿತ್ರ ಪೋಸ್ಟರ್ ನೋಡಿ ಬೇಸರವಾಗಿದೆ. ಕೆಲ ವರ್ಷಗಳಿಂದ ಕೆನಡಾದಲ್ಲೂ ಸಾಂಪ್ರದಾಯಿಕ ಹಿಂದೂ ವಿರೋಧಿ ಮತ್ತು ಭಾರತ-ವಿರೋಧಿ ಗುಂಪುಗಳು ಸೇರಿಕೊಂಡು ಮಾಧ್ಯಮಗಳಲ್ಲಿ ʻಹಿಂದೂಫೋಬಿಕ್ʼ (ಹಿಂದೂ ಧರ್ಮದ ಬಗ್ಗೆ ಭಯ ಹುಟ್ಟಿಸುವುದು) ಲೇಖನಗಳನ್ನು ಪ್ರಕಟಿಸುತ್ತಿವೆ. ಹಿಂದೂ ಧರ್ಮದ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾಳಿಗೆ ಅವಮಾನ – ಸಾಕ್ಷ್ಯಚಿತ್ರ ಪ್ರದರ್ಶನ ಮಾಡದಂತೆ ಸೂಚನೆ
https://twitter.com/AryaCanada/status/1544413469059186688
ʻಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆಯುಂಟು ಮಾಡುವ ಯಾವುದೇ ಉದ್ದೇಶವಿಲ್ಲ. ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ವಿಷಾದ ವ್ಯಕ್ತಪಡಿಸುತ್ತೇವೆʼ ಎಂದು ಅಗಾಖಾನ್ ಮ್ಯೂಸಿಯಂ ಕ್ಷಮೆಯಾಚಿಸಿರುವುದನ್ನು ಸ್ವಾಗತಿಸುತ್ತೇನೆಂದು ಚಂದ್ರ ಆರ್ಯ ತಿಳಿಸಿದ್ದಾರೆ.

ಲೀನಾ ಅವರು ಕಾಳಿ ಕುರಿತಾಗಿ ಸಾಕ್ಷ್ಯ ಚಿತ್ರ ಮಾಡಿದ್ದು, ಕಾಳಿಯ ಒಂದು ಕೈಲಿ ಸಿಗರೇಟು ಮತ್ತೊಂದು ಕೈಲಿ ಎಲ್ಜಿಬಿಟಿಕ್ಯೂ ಧ್ವಜವನ್ನು ನೀಡಲಾಗಿದೆ. ಈ ಪೋಸ್ಟರ್ ಅನ್ನು ಶೇರ್ ಮಾಡಿರುವ ಲೀನಾ, ಈ ಸಾಕ್ಷ್ಯ ಚಿತ್ರವು ಕೆನಡಾ ಫಿಲ್ಮ್ ಫೇಸ್ಟಿವಲ್‍ನಲ್ಲಿ ಬಿಡುಗಡೆ ಆಗುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಆ ಬಳಿಕ ಈ ಪೋಸ್ಟರ್ ಕುರಿತಾಗಿ ಆಕ್ರೋಶ ಕೇಳಿ ಬರುತ್ತಿದೆ. ಇದನ್ನೂ ಓದಿ: ಜೀಸಸ್ ಸುಪ್ರೀಂ ಎಂದಿದ್ದ ವ್ಯಕ್ತಿಗೆ ಪಾಕ್‌ನಲ್ಲಿ ಗಲ್ಲು ಶಿಕ್ಷೆ

Leave a Reply