ನಮ್ಗೆ ಚಂದ್ರನ ಬಳಿಗೆ ಹೋಗುವ ಅಗತ್ಯವಿಲ್ಲ, ಚಂದ್ರನ ಮೇಲೆಯೇ ಬದುಕುತ್ತಿದ್ದೇವೆ: ಪಾಕ್‌ ಪ್ರಜೆ ವ್ಯಂಗ್ಯ

ಇಸ್ಲಾಮಾಬಾದ್‌: ನಾವು ಚಂದ್ರನ (Moon) ಮೇಲೆ ಹೋಗುವ ಅಗತ್ಯವೇ ಇಲ್ಲ. ಈಗಾಗಲೇ ನಾವು ಚಂದ್ರನ ಮೇಲೆ ಬದುಕುತ್ತಿದ್ದೇವೆ. ಚಂದ್ರನ ಮೇಲ್ಮೈ ವಾತಾವರಣವನ್ನ ಇಲ್ಲಿನ ಜನ ಅನುಭವಿಸುತ್ತಿದ್ದಾರೆ ಎಂದು ಪಾಕ್‌ ತಮ್ಮದೇ ದೇಶದ ಸರ್ಕಾರವನ್ನ ಅಣಕಿಸಿದ್ದಾರೆ.

ಇಸ್ರೋ ವಿಜ್ಞಾನಿಗಳ (Isro Scientist) ಪರಿಶ್ರಮ, ಭಾರತೀಯರ ಪ್ರಾರ್ಥನೆ ಫಲವಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿ ಪಡಿಸಿದ ಸಮಯಕ್ಕೆ ಸರಿಯಾಗಿ ಚಂದ್ರಯಾನ-3 (Chandrayaan-3) ವಿಕ್ರಮ್‌ ಲ್ಯಾಂಡರ್‌ (Vikram Lander) ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟು ಸಕ್ಸಸ್‌ ಕಂಡಿದೆ. ಈ ಐತಿಹಾಸಿಕ ಕ್ಷಣವನ್ನ ಇಡೀ ವಿಶ್ವವೇ ಕಣ್ತುಂಬಿಕೊಂಡಿದೆ. ಇದನ್ನೂ ಓದಿ: ಮುಂದಿನ ಪ್ರಾಜೆಕ್ಟ್‌ ಗಗನಯಾನಕ್ಕೂ ನಮ್ಮ ಕಂಪನಿಯಲ್ಲಿ ಬಿಡಿಭಾಗ ತಯಾರಿ: ಚಂದ್ರಯಾನ-3 ರಾಕೆಟ್‌ಗೆ ಬಿಡಿಭಾಗ ಪೂರೈಸಿದ್ದ ಬೆಳಗಾವಿ ದೀಪಕ್‌ ಮಾತು

ದೇಶ ವಿದೇಶಗಳಲ್ಲೂ ಚಂದ್ರಯಾನ-3ರ ಬಗ್ಗೆ ಪ್ರಸಂಶೆಗಳು ವ್ಯಕ್ತವಾಗುತ್ತಿವೆ. ಪಾಕಿಸ್ತಾನದ (Pakistan) ಮಾಜಿ ಸಚಿವ ಫವಾದ್‌ ಚೌಧರಿ ಚಂದ್ರಯಾನ-3 ಯೋಜನೆ ಬಗ್ಗೆ ಪ್ರಸಂಶೆ ವ್ಯಕ್ತಪಡಿಸಿದೆ. ಚಂದ್ರಯಾನ ಸಾಫ್ಟ್‌ ಲ್ಯಾಂಡಿಂಗ್‌ ಅನ್ನು ರಾಷ್ಟ್ರೀಯ ದೂರ ದರ್ಶನದಲ್ಲಿ ನೇರ ಪ್ರಸಾರ ಮಾಡುವಂತೆ ಪಾಕಿಸ್ತಾನ ಸರ್ಕಾರಕ್ಕೆ ಮನವಿ ಮಾಡಿದ್ದರು. ಚೌಧರಿ ಕೋರಿಕೆ ಪಾಕಿಸ್ತಾನದಲ್ಲಿ ಪರ-ವಿರೋಧ ಚರ್ಚೆಯನ್ನೂ ಹುಟ್ಟುಹಾಕಿತ್ತು.

ಈ ನಡುವೆ ಪಾಕಿಸ್ತಾನದ ಯೂಟ್ಯೂಬರ್‌ ಒಬ್ಬರು ಚಂದ್ರಯಾನ-3ರ ಸಂಬಂಧಪಟ್ಟಂತೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸುತ್ತಿದ್ದ ವೇಳೆ ಪಾಕ್‌ ಪ್ರಜೆ ತಮ್ಮ ದೇಶದ ಸರ್ಕಾರವನ್ನೇ ವ್ಯಂಗ್ಯ ಮಾಡಿದ್ದಾನೆ. ಇದನ್ನೂ ಓದಿ: ಚಂದ್ರನ ಮೇಲೆ ರೋವರ್ ಚಲಿಸೋದನ್ನು ನೋಡಿದ ನಂತ್ರವೇ ಮನೆಗೆ ತೆರಳಿದೆ: ಕೆ. ಶಿವನ್

ನಾವು ಈಗಾಗಲೇ ಚಂದ್ರನ ಮೇಲೆ ಬದುಕುತ್ತಿದ್ದೇವೆ, ಚಂದ್ರನ ಅಂಗಳ ಮತ್ತು ಪಾಕಿಸ್ತಾನದ ಎರಡರಲ್ಲೂ ಒಂದೇ ವಾತಾವರಣ ಇದೆ. ಅಲ್ಲಿ ನೀರಿಲ್ಲ, ಇಲ್ಲಿಯೂ ಇಲ್ಲ. ಅಲ್ಲಿ ವಿದ್ಯುತ್‌ ಸೌಲಭ್ಯ ಇಲ್ಲ, ಇಲ್ಲಿಯೂ ಇಲ್ಲ. ಪಾಕಿಸ್ತಾನದ ಪ್ರಜೆಗಳಿಗೆ ಚಂದ್ರನ ಬಳಿಗೆ ಹೋಗುವ ಅಗತ್ಯವೇ ಇಲ್ಲ. ಚಂದ್ರನಲ್ಲಿರುವ ವಾತಾವರಣವನ್ನ ಇಲ್ಲಿನ ಪ್ರಜೆಗಳು ತಮ್ಮ ಸುತ್ತಮುತ್ತಲಿನಲ್ಲೇ ಅನುಭವಿಸುತ್ತಿದ್ದಾರೆ ಎಂದು ಹಾಸ್ಯ ಮಾಡಿದ್ದಾರೆ. ಈ ಕುರಿತ ವೀಡಿಯೋ ತುಣುಕು ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]