ಭಾರತದೊಂದಿಗೆ ಶಾಂತಿಯುತ, ಸಹಕಾರಿ ಬಾಂಧವ್ಯ ಬಯಸುತ್ತೇವೆ: ಮೋದಿಗೆ ಪಾಕ್ ಪ್ರಧಾನಿ ಪ್ರತಿಕ್ರಿಯೆ

ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಶೆಹಬಾಜ್ ಷರೀಫ್ ಅವರಿಗೆ ನರೇಂದ್ರ ಮೋದಿ ಹಾರೈಕೆಯ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಷರೀಫ್ ಮೋದಿಗೆ ಧನ್ಯವಾದ ತಿಳಿಸಿದ್ದಾರೆ. ಇದರೊಂದಿಗೆ ಷರೀಫ್ ಪಾಕಿಸ್ತಾನ ಭಾರತದೊಂದಿಗೆ ಶಾಂತಿಯುತ ಹಾಗೂ ಸಹಕಾರಿ ಬಾಂಧವ್ಯ ಬಯಸುತ್ತದೆ ಎಂದು ರೀಟ್ವೀಟ್ ಮಾಡಿದ್ದಾರೆ.

ಷರೀಫ್ ಪಾಕಿಸ್ತಾನದ ಪ್ರಧಾನಿಯಾಗುತ್ತಿದ್ದಂತೆ ಅಭಿನಂದಿಸಿದ ಮೋದಿ, ಭಾರತ ಭಯೋತ್ಪಾದನೆ ಮುಕ್ತ ಪ್ರದೇಶ, ಶಾಂತಿ ಹಾಗೂ ಸ್ಥಿರತೆಯನ್ನು ಬಯಸುತ್ತದೆ. ಇದರಿಂದ ನಾವು ನಮ್ಮ ಅಭಿವದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು. ಜೊತೆಗೆ ನಮ್ಮ ಜನರ ಯೋಗಕ್ಷೇಮ ಹಾಗೂ ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ತಿಳಿಸಿದ್ದರು. ಇದನ್ನೂ ಓದಿ: ಪಾಕಿಸ್ತಾನದ ನೂತನ ಪ್ರಧಾನಿಗೆ ಮೋದಿ ಅಭಿನಂದನೆ

ಇದಕ್ಕೆ ಪ್ರತಿಕ್ರಿಯಿಸಿದ ಪಾಕ್ ಪ್ರಧಾನಿ, ಮೋದಿಗೆ ಧನ್ಯವಾದ ತಿಳಿಸಿ, ಪಾಕಿಸ್ತಾನ ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರದ ಸಂಬಂಧವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಬಾಕಿ ಉಳಿದಿರುವ ವಿವಾದಗಳ ಶಾಂತಿಯುತ ಇತ್ಯರ್ಥ ಅನಿವಾರ್ಯವಾಗಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕಿಸ್ತಾನದ ತ್ಯಾಗಗಳು ಎಲ್ಲರಿಗೂ ತಿಳಿದಿವೆ. ಶಾಂತಿಯನ್ನು ಕಾಪಾಡೋಣ ಹಾಗೂ ನಮ್ಮ ಜನರ ಸಾಮಾಜಿಕ, ಆರ್ಥಿಕ ಅಭಿವೃದ್ಧಿಗೆ ಗಮನ ಕೊಡೋಣ ಎಂದಿದ್ದಾರೆ. ಇದನ್ನೂ ಓದಿ: ರಷ್ಯಾ ತೈಲ ಖರೀದಿ ಯಾಕೆ – ವಿದೇಶಿ ಪತ್ರಕರ್ತನಿಗೆ ಪಾಠ ಮಾಡಿ ಉತ್ತರ ಕೊಟ್ಟ ಜೈಶಂಕರ್

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿಶ್ವಾಸ ಮತ ಗಳಿಸಲು ವಿಫಲವಾದ ಬಳಿಕ ಪ್ರಧಾನಿ ಸ್ಥಾನಕ್ಕೆ ರಾಜಿನಾಮೆ ನೀಡಿದರು. ಬಳಿಕ ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್(ಪಿಎಂಎಲ್-ಎನ್) ಅಧ್ಯಕ್ಷ ಶೆಹಬಾಜ್ ಷರೀಫ್ ಸೋಮವಾರ ರಾಷ್ಟ್ರೀಯ ಅಸೆಂಬ್ಲಿಯಿಂದ 174 ಮತಗಳನ್ನು ಗಳಿಸಿ, ಪಾಕಿಸ್ತಾನದ 23ನೇ ಪ್ರಧಾನಿಯಾಗಿ ಆಯ್ಕೆಯಾದರು.

Comments

Leave a Reply

Your email address will not be published. Required fields are marked *