ಭಾರತದ ವಿರುದ್ಧ ಸುಳ್ಳು ಆರೋಪ ಮಾಡಿದ್ದ ಪಾಕಿಗೆ ಮತ್ತೆ ವಿಶ್ವಸಂಸ್ಥೆಯಲ್ಲಿ ಮುಖಭಂಗ

ನ್ಯೂಯಾರ್ಕ್‌: ವಿಶ್ವಸಂಸ್ಥೆಯಲ್ಲಿ (UNO) ಮತ್ತೆ ಪಾಕಿಸ್ತಾನಕ್ಕೆ ಮುಖಭಂಗವಾಗಿದೆ. ಪಾಕಿಸ್ತಾನದ (Pakistan) ಕೋರಿಕೆಯ ಮೇರೆಗೆ ಕರೆಯಲಾಗಿದ್ದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ರಹಸ್ಯ ಸಭೆಯಲ್ಲಿ ಯಾವುದೇ ಫಲಿತಾಂಶ ಪ್ರಕಟವಾಗಿಲ್ಲ.

ಭಾರತ (India) ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಪಾಕ್‌ ಮನವಿಯ ಮೇರೆಗೆ ತುರ್ತು ಸಭೆ ನಡೆಯಿತು. ಸಭೆ ಯಾವುದೇ ಹೇಳಿಕೆ, ನಿರ್ಣಯ ಅಥವಾ ಅಧಿಕೃತ ಫಲಿತಾಂಶವಿಲ್ಲದೆ ಮುಕ್ತಾಯಗೊಂಡಿದೆ. ಚರ್ಚೆಯ ಬಳಿಕ ವಿಶ್ವಸಂಸ್ಥೆಯ ಕಡೆಯಿಂದ ಯಾವುದೇ ಮಹತ್ವದ ಪ್ರತಿಕ್ರಿಯೆ ಬಂದಿಲ್ಲ.

ಭದ್ರತಾ ಮಂಡಳಿಯ 15 ಕಾಯಂ ಸದಸ್ಯ ರಾಷ್ಟ್ರಗಳ ಪಟ್ಟಿಯಲ್ಲಿರುವ ಪಾಕಿಸ್ತಾನ ಪರಿಸ್ಥಿತಿಯ ಕುರಿತು ರಹಸ್ಯ ಸಭೆ ನಡೆಸುವಂತೆ ಮನವಿ ಮಾಡಿತ್ತು.  ಇದನ್ನೂ ಓದಿ: 1971ರ ನಂತರ ನಾಳೆ ದೇಶದಲ್ಲಿ ಯುದ್ಧದ ಡ್ರಿಲ್‌! – ಮಾಕ್‌ ಡ್ರಿಲ್‌ ಹೇಗಿರಲಿದೆ?

ಪಾಕಿಸ್ತಾನಕ್ಕೆ ಈ ರೀತಿ ವಿಶ್ವಸಂಸ್ಥೆಯಲ್ಲಿ ಮುಖಭಂಗವಾಗುವುದು ಹೊಸದೆನಲ್ಲ. ಆಗಸ್ಟ್ 2019 ರಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸುವ ಭಾರತದ ಕ್ರಮವನ್ನು ಚರ್ಚಿಸಲು ಚೀನಾ ಭದ್ರತಾ ಮಂಡಳಿಯ ರಹಸ್ಯ ಸಭೆ ನಡೆಸುವಂತೆ ಮನವಿ ಮಾಡಿತ್ತು. ಈ ಸಭೆಯೂ ಯಾವುದೇ ಫಲಿತಾಂಶ ಅಥವಾ ಹೇಳಿಕೆ ಪ್ರಕಟವಾಗದೇ ಕೊನೆಗೊಂಡಿತ್ತು. ಇದನ್ನೂ ಓದಿ: ಕಾಶ್ಮೀರದಲ್ಲಿ 2 ಜಲವಿದ್ಯುತ್ ಯೋಜನೆಗಳಿಗೆ ಚಾಲನೆ – ಪಾಕ್‌ಗೆ ಶಾಕ್‌

ಮಂಡಳಿಯಲ್ಲಿ ಬಹುಪಾಲು ಸದಸ್ಯರು ಕಾಶ್ಮೀರ ಸಮಸ್ಯೆ ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ವಿಷಯ ಎಂದು ಹೇಳಿದ್ದರು.  ಚೀನಾ ಮೂಲಕ ಕಾಶ್ಮೀರ ಸಮಸ್ಯೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಗೆದುಕೊಂಡು ಹೋಗಿದ್ದ ಪಾಕಿಸ್ತಾನದ ಪ್ರಯತ್ನಕ್ಕೆ ಭಾರೀ ಹಿನ್ನಡೆಯಾಗಿತ್ತು.

ಯಾವೆಲ್ಲ ದೇಶಗಳು ಭಾಗಿ?
ಚೀನಾ, ಫ್ರಾನ್ಸ್, ರಷ್ಯನ್ ಒಕ್ಕೂಟ, ಯುನೈಟೆಡ್ ಕಿಂಗ್‌ಡಮ್ ಮತ್ತು ಅಮೆರಿಕ ಶಾಶ್ವತ ಸದಸ್ಯ ದೇಶಗಳ ಜೊತೆ ಸಾಮಾನ್ಯ ಸಭೆಯಿಂದ ಎರಡು ವರ್ಷಗಳ ಅವಧಿಗೆ ಆಯ್ಕೆಯಾದ 10 ದೇಶಗಳ ಪ್ರತಿನಿಧಿಗಳು ಭದ್ರತಾ ಸಮಿತಿಯ ಸಭೆಯಲ್ಲಿ ಭಾಗಿಯಾದರು.

ಅಲ್ಜೀರಿಯಾ, ಡೆನ್ಮಾರ್ಕ್, ಗ್ರೀಸ್, ಗಯಾನಾ, ಪಾಕಿಸ್ತಾನ, ಪನಾಮ, ಕೊರಿಯಾ ಗಣರಾಜ್ಯ, ಸಿಯೆರಾ ಲಿಯೋನ್, ಸ್ಲೊವೇನಿಯಾ, ಸೊಮಾಲಿಯಾ ಭಾಗಿಯಾಗಿತ್ತು.