ಪಾಕ್‍ನಲ್ಲಿ ದಾಖಲೆ ಮಟ್ಟದಲ್ಲಿ ಪೆಟ್ರೋಲ್ ಬೆಲೆ ಏರಿಕೆ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಪೆಟ್ರೋಲ್ ಬೆಲೆ 24.03 ರೂ. ಏರಿಕೆ ಆಗಿದ್ದು, ಈ ಹಿನ್ನೆಲೆಯಲ್ಲಿ ಇಂದಿನಿಂದ ಪ್ರತಿ ಲೀಟರ್‌ಗೆ 233.89 ರೂ. ಹೆಚ್ಚಳವಾಗಿದೆ.

ಈ ಬಗ್ಗೆ ಪಾಕಿಸ್ತಾನದ ಫೆಡರಲ್ ಹಣಕಾಸು ಸಚಿವ ಮಿಫ್ತಾ ಇಸ್ಮಾಯಿಲ್ ಮಾತನಾಡಿ, ಇನ್ನು ಮುಂದೆ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಸಬ್ಸಿಡಿಗಳನ್ನು ಭರಿಸುವ ಸ್ಥಿತಿಯಲ್ಲಿ ಸರ್ಕಾರವಿಲ್ಲ ಎಂದು ತಿಳಿಸಿದರು.

ಇಂದಿನಿಂದ ಪ್ರತಿ ಲೀಟರ್ ಪೆಟ್ರೋಲ್ 233.89 ರೂ., ಡೀಸೆಲ್ 263.31 ರೂ., ಸೀಮೆ ಎಣ್ಣೆ 211.43 ರೂ., ಲೈಟ್ ಡೀಸೆಲ್ ಆಯಿಲ್‌ 207.47 ರೂ. ಏರಿಕೆ ಆಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಟಕ್ಕೆ ಉಕ್ರೇನ್‍ಗೆ ಹೋಗಿದ್ದ ಇಬ್ಬರು US ಪ್ರಜೆಗಳು ನಾಪತ್ತೆ

ಇದೇ ವೇಳೆ ಸಚಿವರು ಹಿಂದಿನ ಸರ್ಕಾರದ ನೀತಿಗಳನ್ನು ಟೀಕಿಸಿ, ಈ ನೀತಿಗಳಿಂದ ದೇಶದ ಆರ್ಥಿಕತೆ ಹದಗೆಟ್ಟಿದೆ ಎಂದು ಕಿಡಿಕಾರಿದರು. ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಸಬ್ಸಿಡಿಗಳನ್ನು ನೀಡುವ ಮೂಲಕ ಉದ್ದೇಶಪೂರ್ವಕವಾಗಿ ಪೆಟ್ರೋಲ್ ಬೆಲೆಯನ್ನು ಕಡಿಮೆ ಮಾಡಿದ್ದಾರೆ. ಅಧಿಕಾರದಲ್ಲಿರುವ ಸರ್ಕಾರವು ಆ ನಿರ್ಧಾರಗಳ ಭಾರವನ್ನು ಭರಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಯುಪಿಯಲ್ಲಿ ಬುಲ್ಡೋಜರ್ ಘರ್ಜನೆ- ಇಂದು ಸುಪ್ರೀಂ ಕೋರ್ಟ್ ವಿಚಾರಣೆ

Live Tv

Comments

Leave a Reply

Your email address will not be published. Required fields are marked *