ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ: ಬುರುಡೆ ಬಿಟ್ಟ ಪಾಕ್‌ ಪ್ರಧಾನಿ

Shehbaz Sharif

– 80 ಜೆಟ್‌ಗಳಲ್ಲಿ 5 ನ್ನು ಪಾಕ್‌ ವಾಯು ಸೇನೆ ಹೊಡೆದುರುಳಿಸಿದೆ ಎಂದ ಶೆಹಬಾಜ್‌ 

ಇಸ್ಲಾಮಾಬಾದ್: ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ ಎಂದು ಮತ್ತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ಬುರುಡೆ ಬಿಟ್ಟಿದ್ದಾರೆ.

ತಡರಾತ್ರಿ ಪಾಕ್ ಮತ್ತು ಪಿಒಕೆ ಹಲವಾರು ಸ್ಥಳಗಳಲ್ಲಿ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಬುಧವಾರ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಮಾತನಾಡಿದರು. ಈ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ. ಪಾಕಿಸ್ತಾನವು 5 ರಫೇಲ್ ಜೆಟ್‌ಗಳು ಮತ್ತು 2 ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಹಸಿಹಸಿ ಸುಳ್ಳು ಹೇಳಿದ್ದಾರೆ. ಇದನ್ನೂ ಓದಿ: ಲಡಾಖ್‍ನಲ್ಲಿ ಪ್ರವಾಸಿಗರಿಗೆ ಉಚಿತ ವಸತಿ!

ಪಾಕಿಸ್ತಾನ ವಾಯುಪಡೆಯು ಪ್ರತೀಕಾರ ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ರಾತ್ರಿಯನ್ನು ಐತಿಹಾಸಿಕ ರಾತ್ರಿಯನ್ನಾಗಿ ಮಾಡಿತು. ದಾಳಿಯಲ್ಲಿ ಮಕ್ಕಳು, ಪುರುಷರು ಮತ್ತು ಮಹಿಳೆಯರು ಸೇರಿದಂತೆ ಅನೇಕ ಪಾಕಿಸ್ತಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಜನರಿಗೆ ಪಾಕ್‌ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.

ಏ.22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವನ್ನು ಭಾರತ ದೂಷಿಸಿದೆ. ಆದರೆ, ಬಲೂಚಿಸ್ತಾನದಲ್ಲಿ ನಡೆದ ರೈಲು ಅಪಹರಣವಾಯಿತು. ಈ ದಾಳಿಗೆ ಭಾರತವೇ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ, 4 ದಿನ ಕ್ವಾರಂಟೈನ್‌ – ಕಾರ್ಯಾಚರಣೆ ಯಶಸ್ವಿಯಾಗಿದ್ದು ಹೇಗೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

ಪಹಲ್ಗಾಮ್ ದಾಳಿಯು ನಾನು ಟರ್ಕಿಯಲ್ಲಿದ್ದಾಗ ನಡೆದಿದೆ. ಈ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿಲ್ಲ. ಈ ವಿಷಯದ ಬಗ್ಗೆ ತನಿಖೆಗೆ ಆಹ್ವಾನ ನೀಡಿದ್ದೇನೆ. ತನಿಖೆಗೆ ಸಹಕರಿಸಲು ಪಾಕಿಸ್ತಾನ ಸಿದ್ಧವಾಗಿದೆ. ಆದಾಗ್ಯೂ, ಭಾರತ ಈ ಪ್ರಸ್ತಾಪವನ್ನು ತಿರಸ್ಕರಿಸಿತು ಎಂದು ಹೇಳಿಕೆ ನೀಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ವಾಯುಪಡೆಯು ಯಾವುದೇ ದಿನ ದಾಳಿ ನಡೆಸುತ್ತದೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಪಾಕಿಸ್ತಾನ ವಾಯುಪಡೆಯು ಪ್ರತೀಕಾರ ತೀರಿಸಿಕೊಳ್ಳಲು ಸಿದ್ಧವಾಗಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಬಾಲಾಕೋಟ್‌, ಬ್ರಹ್ಮೋಸ್‌ ಬಳಿಕ ʻಆಪರೇಷನ್‌ ಸಿಂಧೂರʼ – ಪಾಕ್‌ ನಂಬಿದ್ದ ʻಮೇಡ್‌ ಇನ್‌ ಚೈನಾʼ ರೆಡಾರ್‌ ಫೇಲ್‌

ಭಾರತ ನಡೆಸುತ್ತಿರುವ ದಾಳಿಗಳ ಬಗ್ಗೆ ನಮಗೆ ಮಾಹಿತಿ ಇದೆ. ದಾಳಿಯಲ್ಲಿ ಒಟ್ಟು 80 ಯುದ್ಧ ವಿಮಾನಗಳು ಭಾಗಿಯಾಗಿದ್ದು, ದೇಶದ ಆರು ಸ್ಥಳಗಳಲ್ಲಿ ಅವು ದಾಳಿ ನಡೆಸಿವೆ. ಇದಕ್ಕೆ ಪಿಎಎಫ್ ಸಿದ್ಧವಾಗಿತ್ತು. ಭಾರತೀಯ ಯುದ್ಧ ವಿಮಾನಗಳು ಪೇಲೋಡ್ ಅನ್ನು ಬಿಡುಗಡೆ ಮಾಡಿದ ನಂತರ ಅವುಗಳ ಮೇಲೆ ದಾಳಿ ಮಾಡಿತು. ಐದು ರಫೇಲ್ ಜೆಟ್‌ಗಳನ್ನು ಹೊಡೆದುರುಳಿಸಲು ಸಾಧ್ಯವಾಯಿತು. ಒಂದು ವಿಮಾನ ಪಂಜಾಬ್‌ನ ಭಟಿಂಡಾದಲ್ಲಿ ಬಿದ್ದಿತು. ಪ್ರತಿದಾಳಿಯಲ್ಲಿ ಎರಡು ಡ್ರೋನ್‌ಗಳನ್ನು ಸಹ ಹೊಡೆದುರುಳಿಸಲಾಗಿದೆ. ಇದು ಸಾಂಪ್ರದಾಯಿಕ ಯುದ್ಧವಾಗಿತ್ತು. ಪಾಕಿಸ್ತಾನವು ಈ ಸಾಂಪ್ರದಾಯಿಕ ಯುದ್ಧದಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಯಿತು. ಪಾಕಿಸ್ತಾನ ಸೇನೆಯು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಮರ್ಥವಾಗಿದೆ. ಕಠಿಣ ಸಮಯದಲ್ಲಿ ಅವರಿಗೆ ಸಹಾಯ ಮಾಡಲು ಸಾಧ್ಯವಾಗುತ್ತದೆ ಎಂದು ಜಗತ್ತಿಗೆ ಈಗ ತಿಳಿದಿದೆ ಎಂದು ಪಾಕ್‌ ಪ್ರಧಾನಿ ಬುರುಡೆ ಬಿಟ್ಟಿದ್ದಾರೆ.