ಪಾಕಿಸ್ತಾನದ 2ನೇ ಅತಿ ದೊಡ್ಡ ನೌಕಾ ವಿಮಾನ ನಿಲ್ದಾಣದ ಮೇಲೆ ದಾಳಿ

ಇಸ್ಲಾಮಾಬಾದ್‌: ಪಾಕಿಸ್ತಾನದ (Pakistan) 2ನೇ ಅತಿದೊಡ್ಡ ನೌಕಾ ವಿಮಾನ ನಿಲ್ದಾಣವಾದ ಟರ್ಬತ್‌ನಲ್ಲಿರುವ ಪಿಎನ್‌ಎಸ್ ಸಿದ್ದಿಕ್ ಮೇಲೆ ದಾಳಿ ನಡೆದಿದೆ.

ನಿಷೇಧಿತ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (BLA)ಯ ಮಜೀದ್ ಬ್ರಿಗೇಡ್, ಟರ್ಬತ್‌ನಲ್ಲಿರುವ ನೌಕಾ ವಾಯುನೆಲೆಯ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ ಎಂದು ಬಲೂಚಿಸ್ತಾನ್ ಪೋಸ್ಟ್ ವರದಿ ಮಾಡಿದೆ. ಇದನ್ನೂ ಓದಿ: ಅರುಣಾಚಲ ಪ್ರದೇಶ ನಮ್ಮದು.. ಭಾರತ ಆಕ್ರಮಿಸಿಕೊಂಡಿದೆ: ಚೀನಾ

ಬಲೂಚಿಸ್ತಾನದಲ್ಲಿ ಚೀನಾದ ಹೂಡಿಕೆಗೆ ಮಜೀದ್‌ ಬ್ರಿಗೇಡ್‌ ಟೀಕೆ ವ್ಯಕ್ತಪಡಿಸಿದೆ. ಈ ಪ್ರದೇಶದ ಸಂಪನ್ಮೂಲಗಳನ್ನು ಚೀನಾ ಮತ್ತು ಪಾಕಿಸ್ತಾನ ಎರಡೂ ದೇಶಗಳು ಬಳಸಿಕೊಳ್ಳುತ್ತಿವೆ ಎಂದು ಆರೋಪಿಸಿದೆ. ತನ್ನ ಯೋಧರು ವಾಯುನೆಲೆಯೊಳಗೆ ನುಸುಳಿದ್ದಾರೆ ಎಂದು ಬಿಎಲ್‌ಎ ಹೇಳಿಕೊಂಡಿದೆ. ಹೆಚ್ಚುವರಿಯಾಗಿ, ಚೀನಾದ ಡ್ರೋನ್‌ಗಳನ್ನು ನಿಯೋಜಿಸಲಾಗಿದೆ ಎಂದು ವರದಿಯಾಗಿದೆ.

ಇದರ ಬೆನ್ನಲ್ಲೇ ಹೆಲಿಕಾಪ್ಟರ್‌ಗಳು ಆಕಾಶದಲ್ಲಿ ಗಸ್ತು ತಿರುಗಿವೆ. ಟರ್ಬಟ್ ಮಿಲಿಟರಿ ಚಟುವಟಿಕೆಯಲ್ಲಿ ಗಮನಾರ್ಹ ಹೆಚ್ಚಳ ಕಂಡುಬಂದಿದೆ. ಮೂರು ಗಂಟೆಗಳ ಕಾಲ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳು ನಡೆದಿವೆ ಎಂದು ವರದಿಯಾಗಿದೆ. ಇದನ್ನೂ ಓದಿ: ನೀತಿ ಆಯೋಗದ ಮಾಜಿ ಉದ್ಯೋಗಿ ಲಂಡನ್‌ನಲ್ಲಿ ಅಪಘಾತಕ್ಕೆ ಬಲಿ

ದಾಳಿಯಲ್ಲಿ 10 ಕ್ಕೂ ಹೆಚ್ಚು ಪಾಕಿಸ್ತಾನಿ ಸಿಬ್ಬಂದಿಯನ್ನು ಕೊಂದಿರುವುದಾಗಿ ಬಿಎಲ್‌ಎ ಹೇಳಿಕೊಂಡಿದೆ. ತಮ್ಮವರು ಪಿಎನ್‌ಎಸ್‌ ಸಿದ್ದಿಕ್ ಮೇಲೆ ದಾಳಿ ಮಾಡಿದ್ದಾರೆಂದು ಹೇಳಲಾದ ಆಡಿಯೊ ಕ್ಲಿಪ್ ಅನ್ನು ಸಹ ಬಿಡುಗಡೆ ಮಾಡಿದೆ.