ಭಾರತದೊಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿಯ ಹತ್ಯೆ: ಬಿಎಸ್‌ಎಫ್‌

ಶ್ರೀನಗರ: ಭಾರತದ ಒಳಗೆ ನುಸುಳಲು ಯತ್ನಿಸಿದ ಪಾಕಿಸ್ತಾನಿಯನ್ನು (Pakistan) ಹತ್ಯೆ ಮಾಡಲಾಗಿದೆ ಎಂದು ಬಿಎಸ್‌ಎಫ್‌ ತಿಳಿಸಿದೆ.

ಗಡಿ ಭದ್ರತಾ ಪಡೆ (BSF) ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಹೊಡೆದುರುಳಿಸಿದೆ. ಅಧಿಕಾರಿಗಳ ಪ್ರಕಾರ, ಸಾಂಬಾ ಸೆಕ್ಟರ್‌ನ ಅಂತರರಾಷ್ಟ್ರೀಯ ಗಡಿಯ ಬಳಿ ಆತ ಒಳನುಗ್ಗಲು ಯತ್ನಿಸಿದ್ದನು.

ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ರಾತ್ರಿ 8.20 ರ ಸುಮಾರಿಗೆ ಗಡಿಯಾಚೆಯಿಂದ ಈ ಭಾಗಕ್ಕೆ ನುಸುಳಲು ಪ್ರಯತ್ನಿಸಿದಾಗ ಪಾಕಿಸ್ತಾನಿ ಒಳನುಸುಳುಕೋರನ ಮೇಲೆ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಬಾರ್ಡರ್ ಔಟ್‌ಪೋಸ್ಟ್ ರೀಗಲ್ ಬಳಿ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಿಹೆಚ್‌ಡಿ ವಿದ್ಯಾರ್ಥಿಯ ಅನುಮಾನಾಸ್ಪದ ಸಾವು