ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನ – ಶಂಕಿತ ಪಾಕಿಸ್ತಾನಿ ಹೊಡೆದುರುಳಿಸಿದ ಬಿಎಸ್‌ಎಫ್‌

ಗಾಂಧೀನಗರ: ಗುಜರಾತ್‌ನ ಬನಸ್ಕಾಂತ ಜಿಲ್ಲೆಯ ಬಳಿಕ ಗಡಿ ದಾಟಿ ಭಾರತಕ್ಕೆ ನುಸುಳಿದ್ದ ಶಂಕಿತ ಪಾಕಿಸ್ತಾನಿ ನುಸುಳುಕೋರನನ್ನು (Pakistani intruder) ಗಡಿ ಭದ್ರತಾ ಪಡೆ (BSF) ಹೊಡೆದುರುಳಿಸಿದೆ.

ಅಂತರರಾಷ್ಟ್ರೀಯ ಗಡಿಯನ್ನು ದಾಟಿದ ನಂತರ ಗಡಿ ಬೇಲಿಯ ಕಡೆಗೆ ಅನುಮಾನಾಸ್ಪದ ವ್ಯಕ್ತಿಯೊಬ್ಬ ನಡೆದುಕೊಂಡು ಬರುತ್ತಿದ್ದುದನ್ನು ಭದ್ರತಾ ಪಡೆಗಳು ಪತ್ತೆಹಚ್ಚಿವೆ ಎಂದು ಗುಜರಾತ್‌ನ ಬಿಎಸ್‌ಎಫ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಉಗ್ರರ ದಾಳಿಯಿಂದ 20,000 ಭಾರತೀಯರು ಸಾವು: ವಿಶ್ವಸಂಸ್ಥೆಯಲ್ಲಿ ಪಾಕ್‌ ವಿರುದ್ಧ ಭಾರತ ಕಿಡಿ

ನುಸುಳುಕೋರನಿಗೆ ಒಳ ಬರದಂತೆ ಬಿಎಸ್‌ಎಫ್‌ ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೆ, ಎಚ್ಚರಿಕೆಯನ್ನೂ ನಿರ್ಲಕ್ಷಿಸಿ ಮುಂದೆ ಸಾಗಿದ್ದ. ಆತನನ್ನು ತಡೆಯಲು ಬಿಎಸ್‌ಎಫ್‌ ಸಿಬ್ಬಂದಿ ಗುಂಡು ಹಾರಿಸಿದ್ದಾರೆ. ಗುಂಡೇಟಿಗೆ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ. ಭಾರತ-ಪಾಕಿಸ್ತಾನದ ಸೂಕ್ಷ್ಮ ಗಡಿಯಲ್ಲಿರುವ ಬನಸ್ಕಂತ ಪ್ರದೇಶವು ತನ್ನ ಕಾರ್ಯತಂತ್ರದ ಪ್ರಾಮುಖ್ಯತೆಯಿಂದಾಗಿ ಹೆಚ್ಚಿನ ಜಾಗರೂಕತೆಯ ಕೇಂದ್ರಬಿಂದುವಾಗಿದೆ.

ಯಾವುದೇ ಉಗ್ರ ಕೃತ್ಯಗಳು ನಡೆಯದಂತೆ ತಡೆಯಲು ಬಿಎಸ್‌ಎಫ್ ಈ ಪ್ರದೇಶದಲ್ಲಿ ಗಸ್ತು ಮತ್ತು ಕಣ್ಗಾವಲು ಹೆಚ್ಚಿಸಿದೆ. ಇದನ್ನೂ ಓದಿ: ಜಾರ್ಖಂಡ್‌| ಜೆಜೆಎಂಪಿ ಮುಖ್ಯಸ್ಥ ಪಪ್ಪು ಲೋಹ್ರಾ ಸೇರಿ ಇಬ್ಬರು ನಕ್ಸಲ್‌ ನಾಯಕರ ಎನ್‌ಕೌಂಟರ್‌