ಬೆಂಗಳೂರು: ಕಾರ್ಕಳ ತಾಲೂಕಿನ ಎರ್ಲಪಾಡಿ ಗ್ರಾಮದ ಬೈಲೂರಿನ ಪರಶುರಾಮ ಥೀಂ ಪಾರ್ಕ್ (Parashurama Theme Park) ಕಾಮಗಾರಿಯನ್ನು 4 ತಿಂಗಳ ಒಳಗಡೆ ಪೂರ್ಣಗೊಳಿಸುವಂತೆ ಉಡುಪಿ (Udupi) ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ (High Court) ಸೂಚನೆ ನೀಡಿದೆ.
ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿ ಕೃಷ್ಣ ನಾಯ್ಕ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ (High Court) ನ್ಯಾ.ಮೂ.ಎಂ.ನಾಗಪ್ರಸನ್ನ ಆದೇಶ ಪ್ರಕಟಿಸಿದ್ದಾರೆ.
ಬಾಕಿ ಕೆಲಸ ಪೂರ್ಣಗೊಳಿಸುವುದಕ್ಕೆ ಸೂಕ್ತ ಭದ್ರತೆ ಹಾಗೂ ಅನುಕೂಲಕರ ವಾತಾವರಣ ನಿರ್ಮಿಸಿಕೊಡಿ ಎಂದು ಕೃಷ್ಣ ನಾಯ್ಕ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶ ಪ್ರಕಟಗೊಂಡ ನಾಲ್ಕು ತಿಂಗಳೊಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚಿಸಿದೆ. ಇದನ್ನೂ ಓದಿ: ಅನ್ಯಕೋಮಿನ ಯುವಕನಿಂದ ಅಪ್ರಾಪ್ತೆ ಗರ್ಭಿಣಿ – ದೂರು ನೀಡಿದ್ರೆ ಕೊಲೆ ಬೆದರಿಕೆ ಹಾಕಿದ್ದ ಯುವಕ

ಷಡ್ಯಂತ್ರಕ್ಕೆ ಸೋಲು:
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಿ ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಇದರೊಂದಿಗೆ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಾಪಿತ ಹಿತಾಸಕ್ತಿಗಳು ನಡೆಸಿದ ಷಡ್ಯಂತ್ರಕ್ಕೆ ಸೋಲಾಗಿದ್ದು, ತಕ್ಷಣ ಕಾಮಗಾರಿ ಪ್ರಾರಂಭಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಸುನಿಲ್ ಕುಮಾರ್ ಎಕ್ಸ್ನಲ್ಲಿ ಬರೆದಿದ್ದಾರೆ.
ಕಾರ್ಕಳದ ಪರಶುರಾಮ ಥೀಂ ಪಾರ್ಕ್ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಿ ನಾಲ್ಕು ತಿಂಗಳಲ್ಲಿ ಪೂರ್ಣಗೊಳಿಸುವಂತೆ ನ್ಯಾಯಾಲಯ ಆದೇಶ ನೀಡಿದೆ. ಇದರೊಂದಿಗೆ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸ್ಥಗಿತಗೊಳಿಸಬೇಕೆಂದು ಸ್ಥಾಪಿತ ಹಿತಾಸಕ್ತಿಗಳು ನಡೆಸಿದ ಷಡ್ಯಂತ್ರಕ್ಕೆ ಸೋಲಾಗಿದ್ದು, ತಕ್ಷಣ ಕಾಮಗಾರಿ ಪ್ರಾರಂಭಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ.
— Sunil Kumar Karkala (@karkalasunil) May 3, 2024
ಏನಿದು ಪ್ರಕರಣ?
ಕಾರ್ಕಳ ಮಾಜಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ (Sunil Kumar) ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಿದ್ದರು. ಕಾಮಗಾರಿ ಪೂರ್ಣಗೊಳ್ಳದೇ ಈ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್ (Congress) ಆರೋಪಿಸಿತ್ತು. ಈ ಸಂಬಂಧ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಶಿಫಾರಸ್ಸಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರೀಗ ಸಿಐಡಿ ತನಿಖೆಗೆ ಆದೇಶಿಸಿದ್ದರು. ಇದನ್ನೂ ಓದಿ: ಅಮಿತ್ ಶಾ ನಕಲಿ ವೀಡಿಯೋ ಪ್ರಕರಣ – ಕಾಂಗ್ರೆಸ್ ಕಾರ್ಯಕರ್ತ ಅರೆಸ್ಟ್
ಉದ್ಘಾಟನೆಯಾದ ಬಳಿಕ ಸಿಡಿಲು ನಿರೋಧಕ ಅಳವಡಿಕೆ ಮತ್ತು ಇನ್ನಿತರ ಬಾಕಿ ಕಾಮಗಾರಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಥೀಂ ಪಾರ್ಕ್ ಬಂದ್ ಮಾಡಿರುವ ವಿಚಾರವಾಗಿ, ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದರು. ಪರಶುರಾಮನ ಮೂರ್ತಿ ನಕಲಿ ಎನ್ನುವ ಮೂಲಕ ಹೊಸ ವಿವಾದ ಆರಂಭವಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಶೀಲನೆ ಮಾಡಿದ್ದರು. ಅಧಿಕಾರಿಗಳು ಸ್ಪಷ್ಟವಾದ ಮಾಹಿತಿ ನೀಡದ ಹಿನ್ನಲೆಯಲ್ಲಿ ತನಿಖೆಗೆ ಆದೇಶ ನೀಡಿದ್ದರು.
