ಕಾಂಗ್ರೆಸ್‌ನವರಿಂದಲೇ ಪಕ್ಷಕ್ಕೆ ಸೋಲು: ಈಶ್ವರ್ ಖಂಡ್ರೆ

ಹಾವೇರಿ: ಕಾಂಗ್ರೆಸ್‌ನವರಿಂದಲೇ (Congress) ಪಕ್ಷಕ್ಕೆ ಸೋಲಾಗುತ್ತಿದೆ. ಕಾಂಗ್ರೆಸ್‌ಗೆ ದ್ರೋಹ ಮಾಡಲು ಹೋಗಬೇಡಿ. ಮುಂದೆ ಪಕ್ಷದಲ್ಲಿ ಎಲ್ಲರಿಗೂ ಸ್ಥಾನಮಾನ ಸಿಗಲಿದೆ ಎಂದು ಸಚಿವ ಈಶ್ವರ್ ಖಂಡ್ರೆ (Eshwar Khandre) ಹೇಳಿದ್ದಾರೆ.

ಹಾವೇರಿ (Haveri) ಬೂತ್ ಸಮಿತಿ ಸದಸ್ಯರ ಸಮಾವೇಶದಲ್ಲಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ಉಪಚುನಾವಣೆ (By-Election) ಘೋಷಣೆ ಆಗಬಹುದು. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಮೂರು ಕಡೆ ಸಿದ್ಧತೆ ನಡೆದಿದೆ. ಹೆದರಿಸಿ ಬೆದರಿಸಿ ಇಡಿ, ಸಿಬಿಐ ಮೂಲಕ ಬಿಜೆಪಿಯವರು ಕಾಂಗ್ರೆಸ್ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ನೇತೃತ್ವದಲ್ಲಿ ಉತ್ತಮ ಆಡಳಿತ ನೀಡುತ್ತಿದ್ದೇವೆ. 16 ತಿಂಗಳಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ. ಹೊಟ್ಟೆಕಿಚ್ಚಿನಿಂದ ಸರ್ಕಾರ ಬುಡಮೇಲು ಮಾಡಲು ಪ್ರಯತ್ನ ನಡೆಸಿದ್ದಾರೆ. ಯಾವುದೇ ಶಕ್ತಿ ಬಂದರೂ ಐದು ವರ್ಷ ಏನು ಮಾಡಲು ಸಾಧ್ಯವಿಲ್ಲ. ಕಾಂಗ್ರೆಸ್ ಅಲುಗಾಡಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಮಹಿಳಾ ಪಿಎಸ್‍ಐ ಮೇಲೆ ಹಲ್ಲೆಗೈದು ಪರಾರಿಯಾಗಲು ಯತ್ನ – ಕೊಲೆ ಆರೋಪಿಗೆ ಗುಂಡೇಟು

ಸುಳ್ಳು ಆರೋಪ ಮಾಡಿ, ಸುಳ್ಳೇ ಸತ್ಯ ಮಾಡಲು ಹೊರಟಿದ್ದಾರೆ. ಮೋದಿ, ಅಮಿತ್ ಶಾ ಸಂಚು ಮಾಡಿ ಸಿದ್ದರಾಮಯ್ಯ ಸರ್ಕಾರ ಬುಡಮೇಲು ಮಾಡಲು ಮುಡಾ ಹಗರಣದ ಆರೋಪ ಮಾಡಿದ್ದಾರೆ. ಬಿಜೆಪಿಯವರು ಹೆಣಗಳ ರಾಶಿಗಳ ಮೇಲೆ ರಾಜಕೀಯವನ್ನು ಮಾಡಿದವರು. ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡೋರು ಬಿಜೆಪಿಯವರು. ರಾಹುಲ್ ಗಾಂಧಿ ಪ್ರಧಾನಿ ಆಗುತ್ತಾರೆ ಎಂದು ಮೋದಿಯವರಿಗೆ ಭಯ ಶುರುವಾಗಿದೆ. ಅಭ್ಯರ್ಥಿ ಯಾರೇ ಆಗಿರಲಿ, ಹೈಕಮಾಂಡ್ ಹೇಳಿದಂತೆ ಈ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಚುನಾವಣೆಯಲ್ಲಿ ಕೆಲಸ ಮಾಡಿ ಎಂದು ತಿಳಿಸಿದರು. ಇದನ್ನೂ ಓದಿ: ಪೇಜರ್‌ ಬ್ಲಾಸ್ಟ್‌ ಕೇಸ್‌ನಲ್ಲಿ ಟ್ಟಿಸ್ಟ್‌ – ಘಟನೆ ಹಿಂದೆ ಭಾರತೀಯ ಮೂಲದ ಉದ್ಯಮಿಯ ಕೈವಾಡ ಇರೋದು ನಿಜವೇ?