ದಾವಣಗೆರೆ: ಬಸ್ ನಿಲ್ದಾಣದ ಲಾಡ್ಜನ್ನೇ ಬಾರ್ ಮಾಡಿಕೊಂಡು ಪ್ರಯಾಣಿಕರು ಕುಡಿಯುತ್ತಾ ಕುಳಿತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ದಾವಣಗೆರೆಯ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ನಂದಿನಿ ಲಾಡ್ಜ್ ಮೇಲೆ ಕೆಟಿಜೆ ನಗರ ಪೊಲೀಸರು ದಾಳಿ ನಡೆಸಿದ್ದು, ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡಿದ್ದಾರೆ. ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ಲಾಡ್ಜ್ ಗಳಲ್ಲಿ ಮದ್ಯ ಸೇವನೆಗೆ ಅವಕಾಶಗಳಿಲ್ಲ. ಆದರೆ ನಿಯಮ ಮೀರಿ ನಂದಿನಿ ಲಾಡ್ಜ್ ನಲ್ಲಿ ಮದ್ಯದ ಬಾಟಲಿಗಳನ್ನು ಮಾರಾಟ ಮಾಡುತ್ತಿದ್ದರಲ್ಲದೆ ಅಲ್ಲೇ ಕುಳಿತು ಮದ್ಯ ಸೇವನೆ ಮಾಡಲು ಅವಕಾಶ ಮಾಡಿಕೊಟ್ಟಿದ್ದರು.

ಇದರಿಂದ ಬಸ್ ಚಾಲಕರು ಹಾಗೂ ನಿರ್ವಾಹರು ಮದ್ಯ ಸೇವನೆ ಮಾಡಿ ಬಸ್ ಚಾಲನೆ ಮಾಡುತ್ತಾರೆ ಎನ್ನುವ ಆರೋಪ ಕೇಳಿ ಬಂದಿತ್ತು. ಸಾಮಾಜಿಕ ಕಾರ್ಯಕರ್ತರ ದೂರಿನ ಹಿನ್ನೆಲೆಯಲ್ಲಿ ದಾಳಿ ನಡೆಸಿ 6 ಮದ್ಯದ ಬಾಟಲಿಗಳನ್ನು ಹಾಗೂ ಲಾಡ್ಜ್ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಚಾಲಕರು ಹಾಗೂ ನಿರ್ವಾಹಕರು ಮದ್ಯ ಸೇವನೆ ಮಾಡಿ ಬಸ್ ಚಲಾವಣೆ ಮಾಡುತ್ತಿರುವುದು ತಿಳಿದುಬಂದಿದ್ದು, ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv

Leave a Reply