ಕರ್ನಾಟಕ ಚುನಾವಣೆಗೆ ಅಜ್ಞಾತವಾಸಿ ಪವನ್ ಕಲ್ಯಾಣ್ ಎಂಟ್ರಿ!

ಬೆಂಗಳೂರು: ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಚುನವಾಣಾ ಕಣ ರಂಗೇರುತ್ತಿದೆ. ರಾಜಕೀಯ ಪಕ್ಷಗಳತ್ತ ಸಿನಿಮಾ ತಾರೆಯರು ಮುಖ ಮಾಡುತ್ತಿದ್ದಾರೆ.

ಇತ್ತೀಚೆಗೆ ಸ್ಯಾಂಡಲ್‍ವುಡ್ ಮಾಣಿಕ್ಯ ಸುದೀಪ್ ಜೆಡಿಎಸ್ ಪರವಾಗಿ ಪ್ರಚಾರದಲ್ಲಿ ಭಾಗಿಯಾಗ್ತಾರೆ ಎಂಬ ಸುದ್ದಿಯೊಂದು ಕೇಳಿ ಬಂದಿತ್ತು. ಇದರ ಮಧ್ಯೆಯೇ ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಜೆಡಿಎಸ್ ಪರವಾಗಿ ಪ್ರಚಾರ ಮಾಡೋಕೆ ಕರ್ನಾಟಕಕ ರಾಜಕೀಯಕ್ಕೆ ಧುಮುಕಲಿದ್ದಾರೆ ಎಂಬ ಮಾಹಿತಿಯೊಂದು ಜೆಡಿಎಸ್ ಮೂಲಗಳಿಂದ ತಿಳಿದುಬಂದಿದೆ.

ಈಗಾಗಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಪವನ್ ಕಲ್ಯಾಣ್ ನಡುವೆ ಮೂರು ಸುತ್ತಿನ ಮಾತುಕತೆ ನಡೆದಿದೆ. ಜೆಡಿಎಸ್ ಮುಖಂಡರ ಮಾತಿಗೆ ಪವನ್ ಕಲ್ಯಾಣ್ ಓಕೆ ಅಂದಿದ್ದು, ಕರ್ನಾಟಕದ 25 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ಮಾಡುವ ಸಾಧ್ಯತೆಗಳಿವೆ. ಕರ್ನಾಟಕ-ಆಂಧ್ರ ಗಡಿ ಭಾಗಗಳ ಜಿಲ್ಲೆಗಳಾದ ರಾಯಚೂರು, ಕೋಲಾರ, ತುಮಕೂರು, ಬಳ್ಳಾರಿ, ಬೀದರ್ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲಿದ್ದಾರೆ ಎನ್ನಲಾಗಿದೆ. ಚುನಾವಣೆ ಪ್ರಚಾರಕ್ಕಾಗಿ ಜೆಡಿಎಸ್ ಸಿನಿಮಾ ತಾರೆಯರನ್ನು ಬಳಸಿಕೊಳ್ಳುತ್ತಿದೆ.

ಪವನ್ ಕಲ್ಯಾಣ್ ಸಿನಿಮಾ ಜೊತೆಗೆ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದು, 2014 ಮಾರ್ಚ್ ನಲ್ಲಿ ತಮ್ಮದೇ ‘ಜನ ಸೇನಾ’ ಎಂಬ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಿದ್ದಾರೆ. ಪಕ್ಷದ ಮೂರನೇ ವರ್ಷದ ವಾರ್ಷಿಕೋತ್ಸವದಲ್ಲಿ ‘ಜನಸೇನಾ’ 2019ರ ವಿಧಾನಸಭಾ ಚುನವಾಣೆಯಲ್ಲಿ ಆಂಧ್ರ ಮತ್ತು ತೆಲಂಗಾಣ ಎರಡೂ ರಾಜ್ಯಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಸಹೋದರ ಚಿರಂಜೀವಿ ‘ಜನಸೇನಾ’ ಪಕ್ಷಕ್ಕೆ ಸೇರ್ಪಡೆಯಾಗಲ್ಲ. ರಾಜಕೀಯವಾಗಿ ನನ್ನ ಆಲೋಚನೆಗಳು ಅವರೊಂದಿಗೆ ಹೊಂದಾಣಿಕೆ ಆಗುವುದಿಲ್ಲ. 2019ರ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಶೇ.60ರಷ್ಟು ಕ್ಷೇತ್ರಗಳಲ್ಲಿ ಯುವಕರು ಸ್ಪರ್ಧಿಸಲಿದ್ದು, ನಾನು ಅನಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಿದ್ದರು.

Comments

Leave a Reply

Your email address will not be published. Required fields are marked *