ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ ಎಂದ ಪವರ್ ಸ್ಟಾರ್ ಪವನ್ ಕಲ್ಯಾಣ್

ಬೆಂಗಳೂರು: ತೆಲುಗು ಚಿತ್ರನಟ, ಜನಸೇನಾ ಪಕ್ಷ ಸಂಸ್ಥಾಪಕ ಕನ್ನಡ ರಾಜ್ಯೋತ್ಸವಕ್ಕೆ ಶುಭಕೋರಿ ಟ್ವೀಟ್ ಮಾಡಿದ್ದು, ಸಿರಿಗನ್ನಡಂ ಗೆಲ್ಗೆ ಸಿರಿಗನ್ನಡಂ ಬಾಳ್ಗೆ ಎಂದು ಹೇಳಿದ್ದಾರೆ.

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸರಣಿ ಟ್ವೀಟ್ ಮಾಡಿರುವ ಪವನ್ ಕಲ್ಯಾಣ್, ಮುಖ್ಯಮಂತ್ರಿ ಕುಮಾರಸ್ವಾಮಿ ಜತೆಗಿರುವ ಫೋಟೋ ಅಪ್‍ಲೋಡ್ ಮಾಡಿ ಶುಭ ಕೋರಿದ್ದಾರೆ. 63ನೇ ಕನ್ನಡ ರಾಜ್ಯೋತ್ಸವಕ್ಕೆ ಸಮಸ್ತ ಕನ್ನಡ ಪ್ರಜೆಗಳಿಗೆ, ಕರ್ನಾಟಕದ ಮುಖ್ಯಮಂತ್ರಿಗಳಿಗೆ ಹಾರ್ಧಿಕ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.

ಮತ್ತೊಂದು ಟ್ವೀಟ್‍ನಲ್ಲಿ ಸಿಎಂ ಕುಮಾರಸ್ವಾಮಿ ಅವರ ಆಡಳಿತದಲ್ಲಿ ಕರ್ನಾಟಕ ಸರ್ವಾಂಗೀಣ ಅಭಿವೃದ್ಧಿ ಹೊಂದುತ್ತದೆ ಎಂಬ ವಿಶ್ವಾಸ ತಮಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಮೂರನೇ ಟ್ವೀಟ್‍ನಲ್ಲಿ ಭವ್ಯ ವಿಧಾನಸೌಧದ ಫೋಟೋ ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪವನ್ ಟ್ವೀಟ್ ಮಾಡಿ ಶುಭಾಶಯ ತಿಳಿಸಿರುವುದನ್ನು ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಹಲವರು ಅವರ ಟ್ವೀಟನ್ನು ಮರು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂರು ಟ್ವೀಟ್ ಗಳಿಗೆ 32 ಸಾವಿರಕ್ಕೂ ಮಂದಿ ಲೈಕ್ ಮಾಡಿದ್ದು, 9 ಸಾವಿರ ಮಂದಿ ರೀ ಟ್ವೀಟ್ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *