ಜನರಿಗೆ ಕಾಂಗ್ರೆಸ್ ಗ್ಯಾರಂಟಿ ಇಷ್ಟ ಆಗಿಲ್ಲ, ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ ಕೊಡುವುದನ್ನು ನಿಲ್ಲಿಸೋದೆ ಒಳಿತು: ಎಂ.ಲಕ್ಷ್ಮಣ್

ಮೈಸೂರು: ಸಾಮೂಹಿಕವಾಗಿ ಗ್ಯಾರಂಟಿ ಯೋಜನೆ (Guarantee Scheme) ಕೊಡುವುದನ್ನು ನಿಲ್ಲಿಸೋದೆ ಒಳಿತು. ಜನರಿಗೆ ಕಾಂಗ್ರೆಸ್ (Congress) ಗ್ಯಾರಂಟಿ ಇಷ್ಟ ಆಗಿಲ್ಲ. ಅದನ್ನು ಅವರು ಫಲಿತಾಂಶದ ಮೂಲಕ ತೋರಿಸಿದ್ದಾರೆ ಎಂದು ಮೈಸೂರು-ಕೊಡಗು ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ (M Lakshman) ಅಸಮಾಧಾನ ಹೊರಹಾಕಿದ್ದಾರೆ.

ಈ ಕುರಿತು ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಮ್ಮ ಗ್ಯಾರಂಟಿ ವಿರುದ್ಧ ಮಾತಾನಾಡುತ್ತಿತ್ತು. ಜನ ಅವರನ್ನು ಬೆಂಬಲಿಸಿದ್ದಾರೆ. ಹಾಗಾಗಿ ಜನರಿಗೆ ನಮ್ಮ ಗ್ಯಾರಂಟಿ ಇಷ್ಟ ಆಗಿಲ್ಲ ಅಂತಲೇ ಅಲ್ವಾ? ಗ್ಯಾರಂಟಿ ಯೋಜನೆ ಬಗ್ಗೆ ಮುಖ್ಯಮಂತ್ರಿಗಳು ಈಗ ಮರು ಪರಿಶೀಲನೆ ಮಾಡಬೇಕು. ಈ ಬಗ್ಗೆ ಸಿಎಂ ಗಮನಹರಿಸಬೇಕು. 70% ರಷ್ಟು ಮೇಲ್ವರ್ಗದವರು ಈ ಯೋಜನೆ ಫಲಾನುಭವಿಗಳಾಗಿದ್ದಾರೆ. ಆದರೆ ಅದನ್ನು ಜನರು ತಿರಸ್ಕಾರ ಮಾಡಿದ್ದಾರೆ ಎಂದರು. ಇದನ್ನೂ ಓದಿ: ವೈದ್ಯಕೀಯ ಶಿಕ್ಷಣ ಸಚಿವರ ಕಚೇರಿ ಅಂದಿದ್ದಾರೆ, ನನ್ನ ಹೆಸರು ಹೇಳಿಲ್ಲ- ಶರಣ ಪ್ರಕಾಶ್ ಪಾಟೀಲ್ ಫಸ್ಟ್ ರಿಯಾಕ್ಷನ್

ಬೆಂಜ್ ಕಾರ್ ಹೊಂದಿರುವವನು, 25,000 ಸಂಬಳ ಪಡೆಯುವ ವ್ಯಕ್ತಿಗೆ ಪುಕ್ಕಟೆ ಕರೆಂಟ್ ಕೊಟ್ಟರೆ ಹೇಗೆ? ಈಗಲೂ ಗ್ಯಾರಂಟಿ ಹಣದಿಂದಲೇ ಜೀವನ ನಡೆಸುವ ಜನ ಇದ್ದಾರೆ. ಅಂತಹವರನ್ನು ನೋಡಿ ಗ್ಯಾರಂಟಿ ರೀ ಲುಕ್ ಮಾಡುವ ಅಗತ್ಯ ಇದೆ. ಇದಕ್ಕೆ ಉದಾಹರಣೆ ಎಂದರೆ ಹುಣಸೂರಿನ ಹಲವು ಹಳ್ಳಿಗಳಲ್ಲಿ ಕೇವಲ ಒಂದೇ ಸಮುದಾಯದವರು ಇದ್ದಾರೆ. ಅಲ್ಲಿ ಬಿಜೆಪಿಗೆ 600ಕ್ಕೂ ಹೆಚ್ಚು ಮತ ನೀಡಿದ್ರೆ ನನಗೆ ಕೇವಲ ಮೂರು, ಏಳು ಮತಗಳನ್ನ ನೀಡಿದ್ದಾರೆ. ಒಕ್ಕಲಿಗರು ನನಗೆ ಮತ ಹಾಕಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಾವೇರಿಯಲ್ಲಿ ಆಕಸ್ಮಿಕ ಬೆಂಕಿಗೆ 5 ಅಂಗಡಿಗಳು ಭಸ್ಮ- 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಹಾನಿ

ಸಿದ್ದರಾಮಯ್ಯ (Siddaramaiah) ಅವರಂತಹ ಸಿಎಂ ಈ ದೇಶದಲ್ಲಿ ಮತ್ತೆ ಹುಟ್ಟಲು ಸಾಧ್ಯನಾ? ಸಿಎಂ ಸಿದ್ದರಾಮಯ್ಯರಿಗೆ ತವರಿನಲ್ಲಿ ಎಷ್ಟು ಬಾರಿ ಮುಖಭಂಗ ಮಾಡ್ತಿರಾ? ಇದು ಸ್ಯಾಡಿಸ್ಟ್ ನೇಚರ್ ಅಲ್ವಾ? ಸಿದ್ದರಾಮಯ್ಯಗೆ ಯಾಕೆ ಇಷ್ಟು ನೋವು ಕೊಟ್ಟು ತವರಿನಲ್ಲಿ ಮುಖಭಂಗ ಮಾಡ್ತಿರಾ ಎಂದು ಪ್ರಶ್ನಿಸಿದರು. ಇನ್ನು ಜೆಡಿಎಸ್‌ನಲ್ಲಿ ಸ್ಪರ್ಧಿಸಿದರೆ ಮಾತ್ರ ಒಕ್ಕಲಿಗರಾ? ಬಿಜೆಪಿಯಲ್ಲಿ ಸ್ಪರ್ಧಿಸಿದರೆ ಮಾತ್ರ ಒಕ್ಕಲಿಗರಾ? ನಾವು ಕಾಂಗ್ರೆಸ್‌ನಲ್ಲಿರುವ ಒಕ್ಕಲಿಗರು ಏನೂ ಮಾಡಬೇಕು ಹೇಳಿ ಎಂದು ಕೇಳಿದ್ದಾರೆ. ಇದನ್ನೂ ಓದಿ: ನಾವು ಶಿಸ್ತುಬದ್ಧವಾಗಿ, ಒಗ್ಗಟ್ಟಿನಿಂದ ಇರಬೇಕು- CWC ಸಭೆಯಲ್ಲಿ ಖರ್ಗೆ ಮಾತು